ಬಂಟ್ವಾಳ

ವಿಶ್ವ ವಿಕಲಚೇತನರ ದಿನಾಚರಣೆ

ಬಂಟ್ವಾಳ: ವಿಕಲಚೇತನರಿಗೆ ಸರಕಾರದಿಂದ ದೊರಕುವ ಎಲ್ಲಾ ಸವಲತ್ತುಗಳು ಅತ್ಯಂತ ಅಚ್ಚುಕಟ್ಟಾಗಿ ಫಲಾನುಭವಿಗಳಿಗೆ ಸಿಗುವಂತೆ ಅಧಿಕಾರಿಗಳ ಜೊತೆ ಎಲ್ಲರು ಶಕ್ತಿ ಮೀರಿ ಶ್ರಮಿಸೋಣ ಎಂದು ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ , ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಮತ್ತು ಲಯನ್ಸ್ ಹಾಗೂ ಲಯನೆಸ್ ಕ್ಲಬ್ ಬಂಟ್ವಾಳ ಸಹಯೋಗದಲ್ಲಿ ವಿಕಲ ಚೇತನ ಮಕ್ಕಳ ವಿಶ್ವ ವಿಕಲಚೇತನರ ದಿನಾಚರಣೆ ಸಭಾ ಕಾರ್‍ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು

ವಿಕಲ ಚೇತನರ ಬಗ್ಗೆ ಅನುಕಂಪ ಬೇಡ ಮಾನವೀಯತೆ ಇರಲಿ, ಅವರಿಗೆ ಯಾವುದೇ ಮನಸ್ಸಿಗೆ ನೋವು ಮಾಡದೆ ಅವರನ್ನು ನಮ್ಮವರಂತೆ ಕಾಣುವ, ಕಷ್ಟಸುಖಗಳೊಂದಿಗೆ ನಾವು ಕೈಜೋಡಿಸಿ ಮಾನವರಾಗೋಣ ಎಂದು ಹೇಳಿದರು. ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ವಸಂತ ಬಾಳಿಗಾ ವಹಿಸಿದ್ದರು. ವೇದಿಕೆಯಲ್ಲಿ ವಲಯ 2 ಪ್ರಾಂತ್ಯ1 ರ ವಲಯಾಧ್ಯಕ್ಷ ಜಯಂತ ಶೆಟ್ಟಿ, ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಲಕ್ಷಣ್ ಕುಲಾಲ್ ಅಗ್ರಬೈಲು, ಲಯನೆಸ್ಸ್ ಕ್ಲಬ್ ಅಧ್ಯಕ್ಷೆ ದೇವಿಕಾ ದಾಮೋದರ್, ಪುತ್ತೂರು ಅಸಹಾಯಕರ ಸೇವಾ ಟ್ರಸ್ಟ್ ನ ಅಧ್ಯಕ್ಷ ನಯನ ರೈ , ವಿಠಲ ಕೇಶವ ಪ್ರಭು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಮತ್ತು ದೈಹಿಕ ಶಿಕ್ಷಣಾಧಿಕಾರಿ ಬಾಗೇವಾಡಿ ಉಪಸಿತರಿದ್ದರು. ಕಾರ್‍ಯಕ್ರಮದ ಬಳಿಕ ವಿಕಲ ಚೇತನ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

ಬಿಆರ್‌ಸಿ ರಾಜೇಶ್ ಸ್ವಾಗತಿಸಿ, ಬಿಆರ್‌ಪಿ ಗಣೇಶ್ ವಂದಿಸಿದರು. ನಾರಾಯಣ ಗೌಡ ಕಾರ್‍ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ