ವಿಟ್ಲ: ಹೈನುಗಾರಿಕೆ ಪ್ರೋತ್ಸಾಹಧನವನ್ನು 5 ರೂ.ಗಳಿಗೇರಿಸಲಾಗಿದೆ. ಮಿತಿಮೀರಿದ ಕುಮ್ಕಿ ಹಕ್ಕಿನ ಜಮೀನನ್ನು ಕಡಿತಗೊಳಿಸಿ ಬಡವರಿಗೆ, ದುರ್ಬಲರಿಗೆ, ಸೈನಿಕರಿಗೆ ಒದಗಿಸಲಾಗುವುದು ಎಂದು ಅರಣ್ಯ ಸಚಿವ ರಮಾನಾಥ ರೈ ಹೇಳಿದರು.
ಶನಿವಾರ ಕೊಳ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಲೆತ್ತೂರು ಮೈದಾನದ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಪುತ್ತೂರು ಶಾಸಕಿ ಶಕುಂತಳಾ ಟಿ.ಶೆಟ್ಟಿ ಅವರು ಮಾತನಾಡಿ 94ಸಿಯಲ್ಲಿ ನಿವೇಶನ ಪಡೆದುಕೊಂಡವರನ್ನು ಸಿಸಿ ಕ್ಯಾಮೆರಾದಲ್ಲಿ ಹುಡುಕುವಂತಾಗದಿರಲಿ ಎಂದು ಹೇಳಿದರು.
427 ಮಂದಿಗೆ ಹಕ್ಕುಪತ್ರ ಮತ್ತು ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು. ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಯಿತು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ಎಸ್.ಮಹಮ್ಮದ್, ಮಂಜುಳಾ ಮಾವೆ, ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್‌ಆಲಿ, ಸದಸ್ಯರಾದ ಸಂಜೀವ ಪೂಜಾರಿ, ಕುಲ್ಯಾರು ನಾರಾಯಣ ಶೆಟ್ಟಿ, ಕುಮಾರ್ ಭಟ್ ಬದಿಕೋಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ವಿವಿಧ ಜನಪ್ರತಿನಿಧಿಗಳು, ಪ್ರೊಬೆಷನರಿ ಎಸಿ ಗಾರ್ಗಿ ಜೈನ್, ತಾ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ, ಲೋಕೋಪಯೋಗಿ ಇಲಾಖೆ ಇಇ ಉಮೇಶ್ ಭಟ್, ಆರ್‌ಐ ದಿವಾಕರ, ತಾಲೂಕು ಮಟ್ಟದ ಕಂದಾಯ ಅಧಿಕಾರಿಗಳು, ಶಿಶುಅಭಿವೃದ್ಧಿ ಇಲಾಖಾಧಿಕಾರಿ ಸುಧಾಜೋಷಿ ಮೊದಲಾದವರು ಉಪಸ್ಥಿತರಿದ್ದರು.
ಆರೋಗ್ಯ ಇಲಾಖೆ, ವಾರ್ತಾ ಇಲಾಖೆ,ಕೈಗಾರಿಕಾ ವಿಸ್ತರಣ ಅಽಕಾರಿ ಬಂಟ್ವಾಳ, ಅಗ್ನಿಶಾಮಕ ದಳ,ಪಂಚಾಯತ್‌ರಾಜ್ ಇಲಾಖೆ, ಇಂಜಿನಿಯರಿಂಗ್ ಇಲಾಖೆ, ಕಮರ್ಷಿಯಲ್ ಟ್ಯಾಕ್ಸ್, ಶಿಶು ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೆ.ಎಸ್.ಅರ್.ಟಿ.ಸಿ. ಇಲಾಖೆ, ಪಟ್ಟಣ ಪಂಚಾಯತ್ ವಿಟ್ಲ, ಕಾನೂನು ಮಾಪನ ಇಲಾಖೆ, ಪುರಸಭೆ ಬಂಟ್ವಾಳ, ತಾಲೂಕು ಪಂಚಾಯತ್ ಬಂಟ್ವಾಳ, ಲೋಕೋಪಯೊಗಿ ಇಲಾಖೆ, ಅರಣ್ಯ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಪಶುವೈದ್ಯಕಿಯ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಅಬಕಾರಿ ಇಲಾಖೆ, ರೇಷ್ಮೆ ಇಲಾಖೆ, ಮೆಸ್ಕಾಂ ಇಲಾಖೆ, ಕ್ಕಷಿ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ, ತೋಟಗಾರಿಕೆ ಇಲಾಖೆ, ನೋಂದಣಿ ಇಲಾಖೆ ಅಧಿಕಾರಿಗಳು ಭಾಗವಹಿಸಿ, ಮಾಹಿತಿ ನೀಡಿದರು.
ತಹಶೀಲ್ದಾರ್ ಪುರಂದರ ಹೆಗ್ಡೆ ಸ್ವಾಗತಿಸಿದರು. ಕೊಳ್ನಾಡು ಗ್ರಾ.ಪಂ.ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ವಂದಿಸಿದರು. ನೌಫಲ್‌ಕುಡ್ತಮುಗೇರು ಕಾರ್ಯಕ್ರಮ ನಿರೂಪಿಸಿದರು.