ವಿಟ್ಲ: ಪೆರ್ನೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದ ಪರಿಣಾಮ ವಿಟ್ಲ ಸಮೀಪದ ಮಾಣಿಯಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಚಾಲಕರು ಹಾಗೂ ಸಾರ್ವಜನಿಕರು ಪರದಾಡಿದರು.
ಈ ಸಂದರ್ಭ ಜೋರಾಗಿ ಮಳೆ ಸುರಿದಿದ್ದರಿಂದ ವಾಹನ ಚಾಲಕರು ಮತ್ತಷ್ಟು ತೊಂದರೆಗೊಳಗಾದರು. ಇಬ್ಬರು ಟ್ರಾಫಿಕ್ ಪೊಲೀಸರನ್ನು ಇಲ್ಲಿ ನಿಯೋಜಿಸಿದರಿಂದ ಮಳೆಯ ನಡುವೆ ವಾಹನ ದಟ್ಟಣೆಯನ್ನು ನಿವಾರಿಸಲು ಅವರು ಹರಸಾಹಸಪಟ್ಟರು.