ಬಂಟ್ವಾಳ

ಬಿ.ಸಿ.ರೋಡಿನಲ್ಲಿ ಸುಸಜ್ಜಿತ ಖಾಸಗಿ ಬಸ್ ನಿಲ್ದಾಣ

  • ಪುತ್ತೂರು ಸರಕಾರಿ ಬಸ್ ನಿಲ್ದಾಣ ಮಾದರಿಯಲ್ಲಿ ನಿರ್ಮಾಣ
  • ಬ್ರಹ್ಮಶ್ರೀ ವೃತ್ತದ ಬಳಿ ಜಾಗ
  • 10 ಕೋಟಿ ರೂಪಾಯಿ ವೆಚ್ಚ
  • ಸಚಿವ ರಮಾನಾಥ ರೈ ಘೋಷಣೆ

ಬಂಟ್ವಾಳ: ಪುತ್ತೂರು ಸರಕಾರಿ ಬಸ್ ನಿಲ್ದಾಣ ನಿರ್ಮಾಗೊಂಡ ಬಿಒಟಿ ಯೋಜನೆಯ ಮಾದರಿಯಲ್ಲೇ ಬಿ.ಸಿ.ರೋಡು ಬ್ರಹ್ಮಶ್ರೀ ವೃತ್ತದ ಬಳಿ 10 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಖಾಸಗಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.

ಚಿತ್ರ: ಪೂಜಾ ಸ್ಟುಡಿಯೋ ಮೇಲ್ಕಾರ್

ಸೋಮವಾರ ಸಂಜೆ ಬಂಟ್ವಾಳ ಪುರಸಭೆ ವ್ಯಾಪ್ತಿಯ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣಕ್ಕೆ ಮೀಸಲಿಟ್ಟ ನಿವೇಶನ ಹಾಗೂ ಮೆಲ್ಕಾರ್ ಪೇಟೆ ಅಭಿವೃದ್ಧಿ ಕಾಮಗಾರಿಗಳನ್ನು ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.

ಜಾಹೀರಾತು

ಬಿ.ಸಿ.ರೋರ್ ಮುಖ್ಯ ವೃತ್ತದ ಬಳಿ ಪುರಸಭೆಗೆ ಸೇರಿದ 47 ಸೆಂಟ್ಸ್ ಖಾಲಿ ನಿವೇಶನವಿದ್ದು ಇಲ್ಲಿ ಸುಸಜ್ಜಿತ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲಾಗುವುದು. ಪುತ್ತೂರು ಬಸ್ ನಿಲ್ದಾಣ ನಿರ್ಮಿಸಿರುವ ಗುತ್ತಿಗೆದಾರ ಡಾ. ಮುಹಮ್ಮದ್ ಇಬ್ರಾಹೀಂ ಪಾವೂರು ಅವರು ಬಿಒಟಿ ಯೋಜನೆಯಡಿ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲು ಮುಂದೆ ಬಂದಿದ್ದಾರೆ. ಶೀರ್ಘದಲ್ಲೇ ಯೋಜನೆಯನ್ನು ತಯಾರಿಸಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.

ಬಸ್ ನಿಲ್ದಾಣಕ್ಕೆ ಕಾಯ್ದಿರಿಸಿದ ಜಮೀನಿಗೆ ತಾಗಿಕೊಂಡು 10 ಸೆಂಟ್ಸ್‌ಗೂ ಹೆಚ್ಚು ಪರಂಬೋಕು ಜಾಗವಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಸುಧಾಕರ್ ಸಚಿವರಿಗೆ ಮಾಹಿತಿ ನೀಡಿದರು. ಎಲ್ಲ ಜಾಗವನ್ನು ಸರ್ವೇ ನಡೆಸಿ ಗಡಿ ಗುರುತು ಮಾಡುವಂತೆ ಸಚಿವರು ಇದೇ ಸಂದರ್ಭದಲ್ಲಿ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಸೂಚಿಸಿದರು.

ಬಸ್ ನಿಲ್ದಾಣಕ್ಕೆ ಕಾಯ್ದಿರಿಸಿರುವ ಜಮೀನಿಗಿಂದ ಅನುಕೂಲತೆಯ ಸ್ಥಳ ಇಲ್ಲಿ ಬೇರೆ ಇಲ್ಲ. ಈ ಜಮೀನಿನಲ್ಲಿ ವಾಣಿಜ್ಯ ಸಂಕಿರಣ ಸಹಿತ ಆದುನಿಕ ಮಾದರಿಯ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣಕ್ಕೆ ನಕ್ಷೆ ರೂಪಿಸುವಂತೆ ಗುತ್ತಿಗೆ ಸಂಸ್ಥೆಯ ಚೆಯರ್‌ಮೇನ್ ಡಾ. ಮುಹಮ್ಮದ್ ಇಬ್ರಾಹೀಂ ಅವರಿಗೆ ಸಚಿವ ರಮಾನಾಥ ರೈ ಸೂಚಿಸಿದರು.

ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು,ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಮಾಧವ ಮಾವೆ, ಸ್ಥಳೀಯ ಪುರಸಭಾ ಸದಸ್ಯರಾದ ಸಂಜೀವಿ, ಜೆಸಿಂತಾ ಡಿಸೋಜ, ಮಾಜಿ ಸದಸ್ಯರಾದ ದಾಮೋದರ ಮೆಲ್ಕಾರ್, ಮಹಮ್ಮದ್ ರಫೀಕ್, ಪಕ್ಷದ ಪ್ರಮುಖರಾದ ಮಾಧವ ಎಸ್.ಮಾವೆ, ಉಮೇಶ ಬೋಳಂತೂರು, ಯೂಸುಫ್ ಕರಂದಾಡಿ, ಮಧುಸೂದನ ಶೆಣೈ, ತಹಶೀಲ್ದಾರ್ ಪುರಂದರ ಹೆಗ್ಡೆ, ಹೆದ್ದಾರಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅಬ್ದುಲ್ ರಹಿಮಾನ್, ಪಿಡಬ್ಲ್ಯುಡಿ ಸಹಾಯಕ ಕಾರ್ಯನಿವರ್ಾಹಕ ಎಂಜಿನಿಯರ್ ಉಮೇಶ ಭಟ್, ಸಹಾಯಕ ಎಂಜಿನಿಯರ್ ಅರುಣ್ ಪ್ರಕಾಶ್, ಎಂಜಿನಿಯರ್ ಡೊಮಿನಿಕ್ ಡಿಮೆಲ್ಲೊ ಮತ್ತಿತರರು ಇದ್ದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

4 hours ago