ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಸ್ವದೇಶಿ ಗೋವುಗಳ ಗೋಶಾಲೆ ವಸುಧಾರಾ ಲೋಕಾರ್ಪಣೆ ಡಿಸೆಂಬರ್ 8ರಂದು ನಡೆಯಲಿದೆ.
ವಿದ್ಯಾಕೇಂದ್ರದ ಸ್ಥಾಪಕ, ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸುವರು. ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ಅಮೃತಹಸ್ತದಿಂದ ಗೋಶಾಲೆ ಲೋಕಾರ್ಪಣೆ ನಡೆಯಲಿದೆ. ಬೆಳಗ್ಗೆ 9.30ಕ್ಕೆ ನಡೆಯುವ ಈ ಕಾರ್ಯಕ್ರಮದ ಬಳಿಕ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಬಳಿಕ 10.30ಕ್ಕೆ ಶ್ರೀರಾಮಮಂದಿರಕ್ಕೆ ಆಗಮಿಸುವ ಶ್ರೀಗಳು ಅಲ್ಲಿ ರಾಮಾರ್ಚನೆ ನಡೆಸುವರು ಎಂದು ಕಲ್ಲಡ್ಕ ಡಾ. ಪ್ರಭಾಕರ ಭಟ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿದ್ಯಾಕೇಂದ್ರ ಸಂಚಾಲಕ ವಸಂತ ಮಾಧವ ಹಾಗೂ ಅಧ್ಯಕ್ಷ ನಾರಾಯಣ ಸೋಮಯಾಜಿ ಉಪಸ್ಥಿತರಿದ್ದರು.