ಕಲ್ಲುರ್ಟಿ ಗುಡಿ ಬಳಿ ಅಂಡರ್‌ಪಾಸ್ ರಸ್ತೆ ನಿರ್ಮಿಸಲು ಚಿಂತನೆ

ಶೀಘ್ರವೇ ಉನ್ನತ ಮಟ್ಟದ ಅಧಿಕಾರಿಗಳ ಸಭೆ: ಸಚಿವ ರೈ ಭರವಸೆ

ಜಾಹೀರಾತು

ಬಂಟ್ವಾಳ: ತಾಲ್ಲೂಕಿನ ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಸ್ಥಳೀಯ ನರಿಕೊಂಬು ಮತ್ತು ಶಂಭೂರು ಗ್ರಾಮಸ್ಥರಿಗೆ ಸುರಕ್ಷಿತವಾಗಿ ಸಂಪರ್ಕಿಸಲು ಅನುಕೂಲವಾಗುವಂತೆ ಇಲ್ಲಿನ ಸತ್ಯದೇವತೆ (ಕಲ್ಲುರ್ಟಿ) ಗುಡಿ ಬಳಿ ಅಂಡರ್‌ಪಾಸ್ ರಸ್ತೆ ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

6btl-panemnglr

ಇಲ್ಲಿನ ಕಾರಣಿಕ ಪ್ರಸಿದ್ಧ ಪಾಣೆಮಂಗಳೂರು ಸತ್ಯದೇವತೆ (ಕಲ್ಲುರ್ಟಿ) ಗುಡಿಗೆ ಸೋಮವಾರ ರಾತ್ರಿ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಹಿಂದೆ ಹೆದ್ದಾರಿ ವಿಸ್ತರಣೆಗೆ ಸರ್ವೆ ನಡೆಸಿದ್ದ ಸಂದರ್ಭ ಇಲ್ಲಿನ ಕಾರಣಿಕ ಪ್ರಸಿದ್ಧ ಸತ್ಯದೇವತೆ (ಕಲ್ಲುರ್ಟಿ) ಗುಡಿ ತೆರವುಗೊಳಿಸಲು ಸೂಚಿಸಲಾಗಿತ್ತು. ಇದಕ್ಕಾಗಿ ನರಿಕೊಂಬು ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಉಮೇಶ ಬೋಳಂತೂರು ನೇತೃತ್ವದ ನಿಯೋಗವನ್ನು ಕರೆದೊಯ್ದು ಅಂದಿನ ಭೂಸಾರಿಗೆ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರೊಂದಿಗೆ ಮಾತುಕತೆ ನಡೆಸಿ ತೆರವು ಕಾರ್ಯ ಸ್ಥಗಿತಗೊಳಿಸುವಲ್ಲಿ ಯಶಸ್ವಿಯಾಗಿರುವುದನ್ನು ಅವರು ನೆನಪಿಸಿಕೊಂಡರು.

ಅಂಡರ್‌ಪಾಸ್ ರಸ್ತೆ ನಿರ್ಮಿಸುವ ಬಗ್ಗೆ ಪಿಡಬ್ಲ್ಯುಡಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಂಜಿನಿಯರ್‌ಗಳ ಸಲಹೆ ಪಡೆದು, ಶೀಘ್ರವೇ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸುವುದಾಗಿ ಅವರು ಸ್ಥಳೀಯರಿಗೆ ಭರವಸೆ ನೀಡಿದರು.

ಬಂಟ್ವಾಳ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಕೆಡಿಪಿ ಸದಸ್ಯ ಉಮೇಶ ಬೋಳಂತೂರು, ಹೆದ್ದಾರಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅಬ್ದುಲ್ ರಹಿಮಾನ್, ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ ಭಟ್, ಸಹಾಯಕ ಎಂಜಿನಿಯರ್ ಅರುಣ್ ಪ್ರಕಾಶ್ ಮತ್ತಿತರರು ಇದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
ಜಾಹೀರಾತು
ಜಾಹೀರಾತು

Be the first to comment on "ಕಲ್ಲುರ್ಟಿ ಗುಡಿ ಬಳಿ ಅಂಡರ್‌ಪಾಸ್ ರಸ್ತೆ ನಿರ್ಮಿಸಲು ಚಿಂತನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*