ವಿಟ್ಲ

ಒಡಿಯೂರಿನಲ್ಲಿ ನೂರಕ್ಕೂ ಅಧಿಕ ಭಕ್ತರಿಂದ ದತ್ತಮಾಲಾಧಾರಣೆ

ವಿಟ್ಲ: ನಿರ್ಮಲ ಮನಸ್ಸು ಹೊಂದಲು ದೀಕ್ಷಾಬದ್ಧರಾಗುವುದು ಅವಶ್ಯ. ನಡೆ, ನುಡಿಯಲ್ಲಿ ಶುದ್ಧತೆ ಇದ್ದಾಗ ಬದುಕಲ್ಲಿ ಸತ್ ಚಾರಿತ್ರ್ಯ ನಿರ್ಮಾಣವಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಬುಧವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ದತ್ತಜಯಂತಿ ಮಹೋತ್ಸವ ದಂಗವಾಗಿ ಶ್ರೀ ದತ್ತಮಾಲಾಧಾರಣಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ದತ್ತ ತತ್ತ್ವ ಚಿಂತನೆಯಿಂದ ಜಗತ್ತಿನಲ್ಲಿ ನಡೆಯುವ ಅನಾಚಾರಗಳಿಗೆ ಪರಿಹಾರ ಕಂಡುಕೊಳ್ಳಬಹುದು. ನಿರಂತರ ಬದಲಾವಣೆಯಲ್ಲಿರುವ ತಂತ್ರಜ್ಞಾನ ಹಾಗೂ ಶಾಶ್ವತವಾಗಿರುವ ತತ್ವಜ್ಞಾನ ಜತೆಯಾಗಿ ಸಾಗಿದಾಗ ಮಾತ್ರ ಸಮಾಜ ಉತ್ತಮವಾಗಿರಬಹುದು ಎಂದು ತಿಳಿಸಿದರು.

ಶ್ರೀ ಸಂಸ್ಥಾನದ ಉತ್ಸವಗಳ ವಿವರಗಳನ್ನೊಳಗೊಂಡ 2017 ಇಂಗ್ಲಿಷ್ ವರ್ಷದ ಕ್ಯಾಲೆಂಡರನ್ನು ಬಿಡುಗಡೆಗೊಳಿಸಿದರು. ಊರ-ಪರವೂರಿನ, ಹೊರರಾಜ್ಯಗಳ ಸುಮಾರು 148 ಮಂದಿ ಗುರುಭಕ್ತರು ಶ್ರೀ ದತ್ತಮಾಲಾಧಾರಣೆ ಮಾಡಿದರು. ಒಡಿಯೂರು ಸಾಧ್ವಿ ಶ್ರೀ ಮಾತಾನಂದಮಯೀ ದಿವ್ಯ ಸಾನಿಧ್ಯ ಕರುಣಿಸಿದ್ದರು.

ಮುಂಬಯಿ ಉದ್ಯಮಿ ವಾಮಯ್ಯ ಬಿ ಶೆಟ್ಟಿ, ಕೃಷ್ಣ ಎಲ್ ಶೆಟ್ಟಿ, ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷ ಅಶೋಕ್ ಕುಮಾರ್ ಬಿಜೈ, ಮಂಗಳೂರು ಒಡಿಯೂರು ಶ್ರೀ ಗುರುದೇವ ಸೇವಾ ಬಳಗದ ಅಧ್ಯಕ್ಷ ಜಯಂತ್ ಜೆ ಕೋಟ್ಯಾನ್, ಗ್ರಾಮೋತ್ಸವ ಸಮಿತಿ ಅಧ್ಯಕ್ಷ ಎಚ್ ಕೆ ಪುರುಷೋತ್ತಮ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ನಿಯಮಿತದ ಮಾಜಿ ಪ್ರಧಾನ ವ್ಯವಸ್ಥಾಪಕ ಉಗ್ಗಪ್ಪ ಶೆಟ್ಟಿ, ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರಒಡಿಯೂರು ಘಟಕದ ಅಧ್ಯಕ್ಷೆ ಸರ್ವಾಣಿ ಪಿ.ಶೆಟ್ಟಿ, ಮುಂಬೈ ಘಟಕದ ಅಧ್ಯಕ್ಷೆ ರೇವತಿ ವಿ. ಶೆಟ್ಟಿ, ಸುಹಾಸಿನಿ ಎಸ್. ಶೆಟ್ಟಿ, ಕಲ್ಪನಾ ಕೆ. ಶೆಟ್ಟಿ, ವನಜಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.ಟಿ. ತಾರಾನಾಥ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು. ವೇ. ಮೂ. ಚಂದ್ರಶೇಖರ ಉಪಧ್ಯಾಯರ ನೇತೃತ್ವದಲ್ಲಿ ಶ್ರೀ ದತ್ತ ಮಹಾಯಾಗವು ಆರಂಭಗೊಂಡಿತು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ