ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನವರಿ 11 ಮತ್ತು 12ನೇ ತಾರೀಕಿನಂದು ಬಂಟ್ವಾಳ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗರ ಮಂದಿರ ಸಮೀಪದ ಮೈದಾನದಲ್ಲಿ ಕೃಷಿ ಮೇಳ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಚಪ್ಪರ ಮುಹೂರ್ತ ಇತ್ತೀಚೆಗೆ ನಡೆಯಿತು. ಅರ್ಚಕ ಜಯರಾಮ ಭಟ್ ವೈದಿಕ ವಿಧಾನ ನೆರವೇರಿಸಿದರು. ಕೃಷಿ ಸಮಿತಿ ಅಧ್ಯಕ್ಷ ರೊನಾಲ್ಡ್ ಡಿಸೋಜ, ತಾಲೂಕಿನ ಯೋಜನಾಧಿಕಾರಿ ಸುನೀತಾ ನಾಯಕ್, ಕೇಂದ್ರ ಒಕ್ಕೂಟ ಸಮಿತಿ ಅಧ್ಯಕ್ಷ ಸದಾನಂದ, ನಿಕಟಪೂರ್ವ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಉಪಾಧ್ಯಕ್ಷ ಗೋಪಾಲ ಆಚಾರ್ಯ, ಆನಂದ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕೃಷಿ ಮೇಳಕ್ಕೆ ಚಪ್ಪರ ಮುಹೂರ್ತ"