ವಿಟ್ಲ

ಆಯುರ್ವೇದಕ್ಕೂ ಆಧ್ಯಾತ್ಮಕ್ಕೂ ನಂಟು: ಒಡಿಯೂರು ಶ್ರೀ

ಒಡಿಯೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಆಯುರ್ವೇದಕ್ಕೂ ಆಧ್ಯಾತ್ಮಕ್ಕೂ ಹತ್ತಿರದ ನಂಟಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಜಾಹೀರಾತು

ಶನಿವಾರ ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ಒಡಿಯೂರು ಗುರುದೇವ ಪಬ್ಲಿಕ್ ಚ್ಯಾರಿಟೇಬಲ್ ಟ್ರಸ್ಟ್ ಸಂಚಾಲಿತ ಒಡಿಯೂರು ಶ್ರೀಗುರುದೇವ ಗ್ರಾಮ ವಿಕಾಸ ಯೋಜನೆಯ ವತಿಯಿಂದ ವೆನ್ ಲಾಕ್ ಜಿಲ್ಲಾ ಆಸ್ಪತ್ರೆಯ ಆಯುಷ್ ವಿಭಾಗದ ತಜ್ಞವೈದ್ಯರಿಂದ ನಡೆದ ಆಯುಷ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಚಿಕಿತ್ಸಾ ಪದ್ಧತಿಗಳ ಬಗ್ಗೆ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ ಕಾರ್ಯ ನಡೆಯಬೇಕು. ಪ್ರಕೃತಿಯನ್ನು ಉತ್ತಮವಾಗಿಟ್ಟರೆ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ, ಗ್ರಾಮ ಗ್ರಾಮಗಳಲ್ಲಿ ಆಯುರ್ವೇದ ಅರಿವು ಮೂಡಿಸಿ  ಎಂದು ಶ್ರೀಗಳು ಹೇಳಿದರು.

ವೆನ್ ಲಾಕ್ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕಿ ಡಾ. ಎಚ್ ಆರ್ ರಾಜೇಶ್ವರೀದೇವಿ ಮಾತನಾಡಿ ಆಯುರ್ವೇದದ ಮೂಲಕ ಕಡಿಮೆಯಾಗದ ರೋಗಗಳನ್ನು ಗುಣಪಡಿಸಲು ಸಾಧ್ಯ. ಮಂಗಳೂರಲ್ಲಿ ಆಯುಷ್ ವಿಭಾಗದಿಂದ 50 ಹಾಸಿಗೆಯ ಮಲ್ಟಿಸ್ಪೆಷಲ್ ಆಸ್ಪತ್ರೆ ಮುಂದಿನ ದಿನದಲ್ಲಿ ಸೇವೆಗೆ ಲಭ್ಯವಾಗಲಿದೆ ಎಂದು ಹೇಳಿದರು.

ಜಾಹೀರಾತು

ಕಾಯ ಚಿಕಿತ್ಸೆ, ಬಾಲ ಚಿಕಿತ್ಸೆ, ಹೋಮಿಯೋಪತಿ ಚಿಕಿತ್ಸೆ, ಯೋಗ ಮತ್ತು ನ್ಯಾಚುರೋಪತಿ ವಿಭಾಗದಿಂದ ತಪಾಸಣೆಗಳು ಮತ್ತು ಚಿಕಿತ್ಸೆ ನಡೆಯಿತು. ಆಯುಷ್ ವಿಭಾಗದ ಮುಖ್ಯಸ್ಥೆ ಡಾ. ಸಹನಾ ರೈ, ಕರ್ನಾಟಕ ಆಯುರ್ವೇದ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ. ಸಂತೋಷ್, ಜಿಲ್ಲಾ ಆಯುಷ್ ಆಸ್ಪತ್ರೆಯ ಮುಖ್ಯಸ್ಥ ಡಾ. ಇಕ್ಬಾಲ್ ಜಿ, ಒಡಿಯೂರು ಶ್ರೀಗುರುದೇವ ಗ್ರಾಮ ವಿಕಾಸ ಯೋಜನೆಯ ಸಂಚಾಲಕ ಟಿ. ತಾರಾನಾಥ ಕೊಟ್ಟಾರಿ, ಮುಂಬಯಿ ಶ್ರೀಗುರುದೇವ ಸೇವಾ ಬಳಗದ ಕೃಷ್ಣ ಎಲ್. ಶೆಟ್ಟಿ ಉಪಸ್ಥಿತರಿದ್ದರು. ಅನಿತಾ ರಾವ್ ಪ್ರಾರ್ಥಿಸಿದರು. ಒಡಿಯೂರು ಶ್ರೀ ಗುರುದೇವ ಗ್ರಾಮ ವಿಕಾಸ ಯೋಜನೆಯ ಸೇವಾ ದೀಕ್ಷಿತೆ ಪುಷ್ಪಾ ಸ್ವಾಗತಿಸಿದರು. ಆಯುರ್ವೇದ ತಜ್ಞ ವೈದ್ಯ ಡಾ. ದೇವದಾಸ ಪ್ರಸ್ತಾವನೆಗೈದರು. ಯೋಜನೆ ಗ್ರಾಮ ಸಂಯೋಜಕಿ ಲೀಲಾ ವಂದಿಸಿದರು. ಮೇಲ್ವಿಚಾರಕ ಸದಾಶಿವ ಅಳಿಕೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ