ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಪುಸ್ತಕ ಮೇಳವನ್ನು ರಾಜರವಿವರ್ಮ ವಂಶಸ್ಥ ಮುಂಬೈನಲ್ಲಿ ದೇಶೀಯ ಗೋವುಗಳ ರಕ್ಷಣೆಯಲ್ಲಿ ನಿರತರಾಗಿರುವ ಸೀತಾ ವರ್ಮ ಉದ್ಘಾಟಿಸಿದರು.
ಪುಸ್ತಕ ಮೇಳದಲ್ಲಿ ಮಕ್ಕಳ ಕಥೆ ಪುಸ್ತಕಗಳು, ಭಾರತೀಯ ಸಂಸ್ಕೃತಿಗೆ ಸಂಬಂಧಿಸಿ ಪುರಾಣ, ಮಹಾಪುರುಷರು, ಗಣಿತ, ವಿಜ್ಞಾನ, ಮಾನವೀಯ ಮೌಲ್ಯಗಳು, ವ್ಯಕ್ತಿತ್ವ ವಿಕಸನ ಹಾಗೂ ಮಕ್ಕಳ ಭೌದ್ಧಿಕ ವಿಕಾಸಕ್ಕೆ ಸಂಬಂಧಿಸಿ ಹಲವು ಪುಸ್ತಕಗಳು ಹಾಗೂ ಇವುಗಳ ಇಂಗ್ಲೀಷ್ ಆವೃತ್ತಿಗಳ ಪುಸ್ತಕಗಳು ದೊರೆಯುತ್ತದೆ. ಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬಹುದು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ತಿಳಿಸಿದರು.
ಕಾರ್‍ಯಕ್ರಮದಲ್ಲಿ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಕೋಶಾಧಿಕಾರಿ ಸತೀಶ ಭಟ್ ಶಿವಗಿರಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರವಿರಾಜ್ ಕಣಂತೂರು, ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿ ಸದಸ್ಯರಾದ ಶಿವಶಂಕರ ಭಟ್, ಪದ್ಮನಾಭ ಪಿ.ಕೆ. ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…