ನಿಧನ
ನಿವೃತ್ತ ಮುಖ್ಯಶಿಕ್ಷಕ ಗೋಪಾಲ ಭಟ್
ಬಂಟ್ವಾಳ ತಾಲ್ಲೂಕಿನ ಕೊಯಿಲ ಸಮೀಪದ ಹೋರಂಗಳ ಶ್ರೀರಾಮ ನಗರ ನಿವಾಸಿ, ನಿವೃತ್ತ ಮುಖ್ಯಶಿಕ್ಷಕ ಎಂ.ಗೋಪಾಲ ಭಟ್ (81) ಇವರು ಅಸೌಖ್ಯದಿಂದ ಶನಿವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ ಮತ್ತು ನಾಲ್ವರು ಪುತ್ರರು ಇದ್ದಾರೆ. ಇಲ್ಲಿನ ಕೊಯಿಲ ಸಕರ್ಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 25 ವರ್ಷಗಳಲ್ಲಿ ಶಿಕ್ಷಕರಾಗಿ ಬಳಿಕ ಮುಖ್ಯಶಿಕ್ಷಕರಾಗಿ ದುಡಿದು ನಿವೃತ್ತಿಯಾಗಿದ್ದರು. ಆರಂಭದಲ್ಲಿ ಸ್ಥಳೀಯ ಕುಟ್ಟಿಕಳ-ಕಪರ್ೆ ಸಹಿತ ಮಳಲಿ, ಅಶ್ವತ್ಥಪುರ, ಕಲ್ಲಮುಂಡ್ಕೂರು ಮತ್ತಿತರ ಶಾಲೆಗಳಲ್ಲಿ ಶಿಕ್ಷಕರಾಗಿದ್ದ ಇವರು ಬಳಿಕ ಕೊಯಿಲ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿಯೂ ದುಡಿದಿದ್ದರು.

ಸೋಮಯ ಮೂಲ್ಯ
ಬಂಟ್ವಾಳ ತಾಲ್ಲೂಕಿನ ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ, ದರ್ಶನಪಾತ್ರಿ ಸೋಮಯ್ಯ ಯಾನೆ ಧೂಮ ಮೂಲ್ಯ (80) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಈಚೆಗೆ ನಿಧನರಾದರು. ಮೃತರಿಗೆ ಪತ್ನಿ ಮತ್ತು ಪುತ್ರ ಇದ್ದಾರೆ. ಇವರು ಕಳೆದ 18ವರ್ಷಗಳಿಂದ ಇಲ್ಲಿನ ಪ್ರಸಿದ್ಧ ಕನಪಾಡಿತ್ತಾಯ ದೈವಸ್ಥಾನದಲ್ಲಿ ಪಾತ್ರಿಯಾಗಿ ಗುರುತಿಸಿಕೊಂಡಿದ್ದರು.

ಮಾರಪ್ಪ ಪೂಜಾರಿ
ಬಂಟ್ವಾಳ ತಾಲ್ಲೂಕಿನ ಮೆಲ್ಕಾರ್ ಸಮೀಪದ ಬೋಳಂಗಡಿ ನಿವಾಸಿ ಮಾರಪ್ಪ ಪೂಜಾರಿ (78) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಶನಿವಾರ ನಿಧನರಾದರು. ಮೃತರಿಗೆ ಪತ್ನಿ, ನಾಲ್ವರು ಪುತ್ರರು ಮತ್ತು ಐವರು ಪುತ್ರಿಯರು ಇದ್ದಾರೆ. ಪ್ರಗತಿಪರ ಕೃಷಿಕರಾಗಿದ್ದ ಇವರು ಬಿಲ್ಲವ ಸಮುದಾಯದಲ್ಲಿ ಗುರಿಕಾರರಾಗಿ ಗುರುತಿಸಿಕೊಂಡಿದ್ದರು.

ಮಹಾನಂದ ಪೂಜಾರಿ
ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಸಾಲುಕೋಡಿ ನಿವಾಸಿ ಮಹಾನಂದ ಪೂಜಾರಿ (55) ಇವರು ಅಸೌಖ್ಯದಿಂದ ಸ್ವಗೃಹದಲ್ಲಿ ಶನಿವಾರ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿ ಇದ್ದಾರೆ. ಮೃತರು ಅಡಿಕೆ ಸುಳಿಯುವ ಕೆಲಸದಲ್ಲಿ ನೈಪುಣ್ಯತೆ ಹೊಂದಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

55 minutes ago