ವಿಟ್ಲ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಎರಡು ಪ್ರತ್ಯೇಕ ಅಪಘಾತ ಭಾನುವಾರ ಸಂಭವಿಸಿದೆ.
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪ ಸೂರಿಕುಮೇರು ಎಂಬಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರಿಗೆ ಗಾಯಗಳಾಗಿವೆ. ಕೇರಳ ಮೂಲದ ಸಾಹಿನ್(20) ಮತ್ತು ಮ್ಯಾಥ್ಯೂ(20) ಗಾಯಗೊಂಡವರು. ಇವರಿಬ್ಬರೂ ಮಂಗಳೂರಿನ ಕೆಎಂಸಿ ವಿದ್ಯಾರ್ಥಿಗಳು. ಅತಿಯಾದ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಬಂದ ಟ್ಯಾಂಕರ್ ಗೆ ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿತು. ಕೂಡಲೇ ಇಬ್ಬರನ್ನೂ 108ರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಮತ್ತೊಂದು ಘಟನೆಯಲ್ಲಿ ಮಾಣಿ ಮೈಸೂರು ಹೆದ್ದಾರಿಯ ವಿಟ್ಲ ಠಾಣಾ ವ್ಯಾಪ್ತಿಯ ಕೊಡಾಜೆ ಸಮೀಪ ನೇರಳಕಟ್ಟೆ ಎಂಬಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡಿದ್ದಾರೆ. ಕಲ್ಲಡ್ಕ ಸಮೀಪ ನಿವಾಸಿಗಳಾದ ರಂಜಿತ್ (24) ಮತ್ತು ವಿಶಿತ್ (23) ಗಾಯಗೊಂಡವರು. ಪುತ್ತೂರು ಕಡೆಗೆ ಹೋಗುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ. ಘಟನೆಯಿಂದ ಬೈಕಿಗೆ ಬೆಂಕಿ ಹೊತ್ತಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಶನಿವಾರ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಎರಡು ಅಪಘಾತಗಳು ಸಂಭವಿಸಿತ್ತು. ಅದು ರಾಜ್ಯ ಹೆದ್ದಾರಿಯಲ್ಲಾದರೆ, ಭಾನುವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿವೆ.
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಪ್ರತ್ಯೇಕ ಅಪಘಾತ, ನಾಲ್ವರಿಗೆ ಗಾಯ"