ವಿಟ್ಲ

ಪ್ರತ್ಯೇಕ ಅಪಘಾತ, ನಾಲ್ವರಿಗೆ ಗಾಯ

ವಿಟ್ಲ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಎರಡು ಪ್ರತ್ಯೇಕ ಅಪಘಾತ ಭಾನುವಾರ ಸಂಭವಿಸಿದೆ.

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪ ಸೂರಿಕುಮೇರು ಎಂಬಲ್ಲಿ ಭಾನುವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರಿಗೆ ಗಾಯಗಳಾಗಿವೆ. ಕೇರಳ ಮೂಲದ ಸಾಹಿನ್(20) ಮತ್ತು ಮ್ಯಾಥ್ಯೂ(20) ಗಾಯಗೊಂಡವರು. ಇವರಿಬ್ಬರೂ ಮಂಗಳೂರಿನ ಕೆಎಂಸಿ ವಿದ್ಯಾರ್ಥಿಗಳು. ಅತಿಯಾದ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಬಂದ ಟ್ಯಾಂಕರ್ ಗೆ ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿತು. ಕೂಡಲೇ ಇಬ್ಬರನ್ನೂ 108ರ  ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಜಾಹೀರಾತು

ಮತ್ತೊಂದು ಘಟನೆಯಲ್ಲಿ ಮಾಣಿ ಮೈಸೂರು ಹೆದ್ದಾರಿಯ ವಿಟ್ಲ ಠಾಣಾ ವ್ಯಾಪ್ತಿಯ ಕೊಡಾಜೆ ಸಮೀಪ ನೇರಳಕಟ್ಟೆ ಎಂಬಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡಿದ್ದಾರೆ. ಕಲ್ಲಡ್ಕ ಸಮೀಪ ನಿವಾಸಿಗಳಾದ ರಂಜಿತ್ (24) ಮತ್ತು ವಿಶಿತ್ (23) ಗಾಯಗೊಂಡವರು. ಪುತ್ತೂರು ಕಡೆಗೆ ಹೋಗುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ. ಘಟನೆಯಿಂದ ಬೈಕಿಗೆ ಬೆಂಕಿ ಹೊತ್ತಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಶನಿವಾರ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಎರಡು ಅಪಘಾತಗಳು ಸಂಭವಿಸಿತ್ತು. ಅದು ರಾಜ್ಯ ಹೆದ್ದಾರಿಯಲ್ಲಾದರೆ, ಭಾನುವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿವೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ