ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆಯಲ್ಲಿ ವಾಹನ ಪಾರ್ಕಿಂಗ್ ಮಾಡಲು ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ನಡೆಸಿದನ್ವಯ ಬುಧವಾರ ತಹಸೀಲ್ದಾರ್ ಪುರಂದರ ಹೆಗ್ಡೆ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಅಂಗಡಿ ಮಾಲೀಕರಿಗೆ ತೆರವುಗೊಳಿಸಲು ಗಡುವು ನೀಡಿದ್ದಾರೆ.
ಜಿಲ್ಲಾಧಿಕಾರಿ ಪರಿಶೀಲನೆ ಬಳಿಕ ಕಂದಾಯ ಅಧಿಕಾರಿಗಳು ಮತ್ತು ಪುರಸಭೆಯ ಅಧಿಕಾರಿಗಳು ಜಂಟಿಯಾಗಿ ಅಳತೆ ಕಾರ್ಯ ನಡೆಸಿದ್ದರು. ಈ ಸಂದರ್ಭ ಅಗಲಗೊಳ್ಳಲಿರುವ ರಸ್ತೆಯ ಬದಿಯಲ್ಲಿ ಇರುವ ಗೂಡಂಗಡಿ, ಗ್ಯಾರೇಜು, ಕ್ಯಾಂಟಿನ್ ಗಳನ್ನು ತೆರವು ಮಾಡುವಂತೆ ಸೂಚಿಸಿದ್ದರು.
ಇದೀಗ ಪುನ: ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಹಾಗೂ ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಂಗಡಿ ಮಾಲೀಕರಿಗೆ ಗಡುವು ನೀಡಿದ್ದಾರೆ. ಈ ಸಂದರ್ಭದಲ್ಲಿ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ. ಪುರಸಭೆ ಮುಖ್ಯಾಧಿಕಾರಿ ಸುಧಾಕರ್, ಸಮುದಾಯ ಸಂಘಟನಾ ಅಧಿಕಾರಿ ಮತ್ತಡಿ , ಪುರಸಭೆ ಆರ್.ಒ ಶಿವ ನಾಯ್ಕ್ , ಪುರಸಭೆ ಕಂದಾಯ ನಿರೀಕ್ಷಕ ಪರಷೋತ್ತಮ, ಗ್ರಾಮ ಕರಣಿಕರಾದ ಜನಾರ್ದನ್. ಯೊಗಾನಂದ, ತಾಲೂಕು ಕಚೇರಿ ಸಿಬ್ಬಂದಿಗಳಾದ ಸದಾಶಿವ ಕೈಕಂಬ ಹಾಗೂ ಶಿವ ಪ್ರಸಾದ್ ಜೊತೆಗಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…