ಬಂಟ್ವಾಳ

ವಾಹನ ಪಾರ್ಕಿಂಗ್ ಗೆ ಅಂಗಡಿ ತೆರವುಗೊಳಿಸಲು ಗಡುವು

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆಯಲ್ಲಿ ವಾಹನ ಪಾರ್ಕಿಂಗ್ ಮಾಡಲು ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ನಡೆಸಿದನ್ವಯ ಬುಧವಾರ ತಹಸೀಲ್ದಾರ್ ಪುರಂದರ ಹೆಗ್ಡೆ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಅಂಗಡಿ ಮಾಲೀಕರಿಗೆ ತೆರವುಗೊಳಿಸಲು ಗಡುವು ನೀಡಿದ್ದಾರೆ.

ಜಿಲ್ಲಾಧಿಕಾರಿ ಪರಿಶೀಲನೆ  ಬಳಿಕ ಕಂದಾಯ ಅಧಿಕಾರಿಗಳು ಮತ್ತು ಪುರಸಭೆಯ ಅಧಿಕಾರಿಗಳು ಜಂಟಿಯಾಗಿ  ಅಳತೆ ಕಾರ್ಯ ನಡೆಸಿದ್ದರು. ಈ ಸಂದರ್ಭ ಅಗಲಗೊಳ್ಳಲಿರುವ ರಸ್ತೆಯ ಬದಿಯಲ್ಲಿ ಇರುವ ಗೂಡಂಗಡಿ, ಗ್ಯಾರೇಜು, ಕ್ಯಾಂಟಿನ್ ಗಳನ್ನು ತೆರವು ಮಾಡುವಂತೆ ಸೂಚಿಸಿದ್ದರು.

ಜಾಹೀರಾತು

ಇದೀಗ ಪುನ: ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಹಾಗೂ ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಂಗಡಿ ಮಾಲೀಕರಿಗೆ ಗಡುವು ನೀಡಿದ್ದಾರೆ. ಈ ಸಂದರ್ಭದಲ್ಲಿ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ. ಪುರಸಭೆ ಮುಖ್ಯಾಧಿಕಾರಿ ಸುಧಾಕರ್,   ಸಮುದಾಯ ಸಂಘಟನಾ ಅಧಿಕಾರಿ ಮತ್ತಡಿ , ಪುರಸಭೆ ಆರ್.ಒ ಶಿವ ನಾಯ್ಕ್ , ಪುರಸಭೆ ಕಂದಾಯ ನಿರೀಕ್ಷಕ ಪರಷೋತ್ತಮ, ಗ್ರಾಮ ಕರಣಿಕರಾದ ಜನಾರ್ದನ್. ಯೊಗಾನಂದ, ತಾಲೂಕು ಕಚೇರಿ ಸಿಬ್ಬಂದಿಗಳಾದ ಸದಾಶಿವ ಕೈಕಂಬ ಹಾಗೂ ಶಿವ ಪ್ರಸಾದ್ ಜೊತೆಗಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ