ಬಂಟ್ವಾಳ: ತುಂಬೆ ಫಾದರ್ ಮುಲ್ಲರ್ ಹೋಮಿಯೋಪಥಿ ಹೊರರೋಗಿ ವಿಭಾಗ ವತಿಯಿಂದ ಉಚಿತ ಹೋಮಿಯೋಪಥಿ ವೈದ್ಯಕೀಯ ತಪಾಸಣಾ ಶಿಬಿರ ಡಿಸೆಂಬರ್ 17ರಂದು ನಡೆಯಲಿದೆ.
ಬೆಳಗ್ಗೆ 9ರಿಂದ 4ಗಂಟೆವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಮಕ್ಕಳ ಖಾಯಿಲೆಗಳು, ಮಹಿಳೆಯರ ಖಾಯಿಲೆಗಳು, ವೃದ್ಧಾಪ್ಯದ ಸಮಸ್ಯೆಗಳು ಹಾಗೂ ಇತರ ಖಾಯಿಲೆಗಳಿಗೆ ಉಚಿತ ಔಷಧ ಮತ್ತು ಚಿಕಿತ್ಸೆ ನೀಡಲಾಗುತ್ತದೆ. ಶಿಬಿರವನ್ನು ತುಂಬೆ ಗ್ರಾ.ಪಂ.ಮಾಜಿ ಅಧ್ಯಕ್ಷ ಮಹಮ್ಮದ್ ವಳವೂರು, ಸಾಮಾಜಿಕ ಸೇವಾ ಕರ್ತ ಸಿಲ್ವೆಸ್ಟರ್ ಡಿ’ಸೋಜ, ಕೊಡ್ಮಾಣ್ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೊಡ್ಮಾನ್ ಕಾಂತಪ್ಪ ಶೆಟ್ಟಿ , ಹೋಮಿಯೊಪತಿ ಫಾ.ಮುಲ್ಲರ್ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಶಿವಪ್ರಸಾದ್, ವೈದ್ಯಕೀಯ ಅಧೀಕ್ಷಕ ಡಾ. ಗಿರೀಶ್ ನಾವಡ ಭಾಗವಹಿಸಲಿದ್ದಾರೆ ಎಂದು ಆಡಳಿತಾಧಿಕಾರಿ ರೆ.ಫಾ.ರೋಶನ್ ಕ್ರಾಸ್ತ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "17ರಂದು ಹೋಮಿಯೋಪತಿ ಉಚಿತ ಶಿಬಿರ"