ಬಂಟ್ವಾಳ

17ರಂದು ಶಂಭೂರು ಪ್ರೌಢ ಶಾಲಾ ವಾರ್ಷಿಕೋತ್ಸವ

ಬಂಟ್ವಾಳ: ತಾಲೂಕಿನ ಶಂಭೂರು, ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲಾ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಡಿ.17ರಂದು ಪೂರ್ವಾಹ್ನ 10ಕ್ಕೆ ನಡೆಯಲಿದೆ.

ತಾ.ಪಂ. ಅಧ್ಯಕ್ಷ ಚಂದ್ರಹಾಸ್ ಕರ್ಕೇರಾ ಅಧ್ಯಕ್ಷತೆಯಲ್ಲಿ ನಡೆಯುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಂಗಳೂರು ಟ್ರಿಡೆಂಟ್ ಇನ್ಫಾಸ್ಟ್ರಕ್ಚರ್‌ನ ಆಡಳಿತ ಪಾಲುದಾರ ಮನೋಜ್ ಶೆಟ್ಟಿ ಧ್ವಜಾರೋಹಣ ಗೈಯ್ಯಲಿದ್ದಾರೆ. ಜಿ.ಪಂ. ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ನರಿಕೊಂಬು ಗ್ರಾ.ಪಂ. ಸದಸ್ಯರಾದ ಜಯರಾಜ್, ವಿಶಾಲಾಕ್ಷಿ, ಗೀತಾ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ, ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರಕಾಶ್ ಕಾರಂತ, ರೋಟರಿ ಕ್ಲಬ್ ರಿತೇಶ್ ಬಾಳಿಗಾ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನಾರಾಯಣ ಗೌಡ, ಉದ್ಯಮಿ ಪದ್ಮನಾಭ ಮಯ್ಯ, ದುರ್ಗಾಪರಮೇಶ್ವರೀ ಮಹಿಳಾ ಮಂಡಳಿ ಅಧ್ಯಕ್ಷೆ ಸುನೀತಾ ಪದ್ಮನಾಭ, ಶೇಡಿಗುರಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಗೋವಿಂದ ಪೂಜಾರಿ, ಯಕ್ಷಲೋಕ ನಿರ್ದೇಶಕ ಗೋಪಾಲ ಅಂಚನ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ರಾತ್ರಿ 7ಕ್ಕೆ ನಡೆಯುವ ಶಾಲಾ ವಾರ್ಷಿಕೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯ ಎಸ್.ಆರ್.ಪಾಟೀಲ್, ತಾ.ಪಂ. ಸದಸ್ಯೆ ಗಾಯತ್ರಿ ರವೀಂದ್ರ ಸಪಲ್ಯ, ಗ್ರಾ.ಪಂ.ಅಧ್ಯಕ್ಷ ಯಶೋಧರ ಕರ್ಬೆಟ್ಟು, ಬೂಡ ಅಧ್ಯಕ್ಷ ಪಿಯೂಸ್ ಎಲ್.ರೋಡ್ರಿಗಸ್, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಶಿಕ್ಷಣ ಉಪ ನಿರ್ದೇಶಕ ವಾಲ್ಟರ್ ಡಿಮೆಲ್ಲೋ, ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜ್ ಎಲ್.ಶಿರಾಲಿ, ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎ.ಸದಾನಂದ ಶೆಟ್ಟಿ, ಬೆಂಗಳೂರು ಶೀಲಾ ಕಿಚನ್ ಇಕ್ವಿಪ್‌ಮೆಂಟ್ಸ್ ಪ್ರೈ.ಲಿ. ಆಡಳಿತ ನಿರ್ದೇಶಕ ರವೀಂದ್ರನಾಥ ಮಾರ್ಲ, ಎಸ್‌ಡಿಎಂಸಿ ಅಧ್ಯಕ್ಷ ಆನಂದ ಸಾಲಿಯಾನ್, ಪತ್ರಕರ್ತ ರಾಜಾ ಬಂಟ್ವಾಳ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಮಾಣಿ-ದಾಸಕೋಡಿ-ನೀರಪಾದೆ-ಶಂಭೂರು-ಶೇಡಿಗುರಿ-ನರಿಕೊಂಬು-ಪಾಣೆಮಂಗಳೂರು-ಬಿ.ಸಿ.ರೋಡ್ ಮಾರ್ಗವಾಗಿ ಸರಕಾರಿ ಬಸ್ ಸೌಕರ್ಯ ಕಲ್ಪಿಸಲಾಗಿದ್ದು, ಸಚಿವ ಬಿ.ರಮಾನಾಥ ರೈ ಚಾಲನೆ ಗೈಯ್ಯಲಿದ್ದಾರೆ. ಸಂಜೆ 6ರಿಂದ ಶಾಲಾ ವಿದ್ಯಾರ್ಥಿಗಳಿಂದ ಶ್ರೀಕೃಷ್ಣ ಲೀಲೆ ಕಂಸ ವಧೆ ಯಕ್ಷಗಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ ಎಂದು ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ