ಬಿ.ಸಿ.ರೋಡಿನಲ್ಲಿ ಸ್ವಚ್ಛತಾ ಡ್ರೈವ್

ಬಂಟ್ವಾಳ: ಸ್ವಚ್ಛ ಭಾರತ್ ಮಿಷನ್ ನಡಿ ಬಂಟ್ವಾಳ ಪುರಸಭೆ ನಡೆಸುತ್ತಿರುವ 51 ನೇ ವಾರದ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಬಿ.ಸಿ.ರೋಡಿನಲ್ಲಿ ಸ್ವಚ್ಛತಾ ಡ್ರೈವ್ ಕಾರ್ಯಕ್ರಮ ಗುರುವಾರ ತಾಲೂಕು ಕಚೇರಿ ಎದುರು ನಡೆಯಿತು.

ಈ ಸಂದರ್ಭ ಮಾತನಾಡಿದ ಬಂಟ್ವಾಳ ಪುರಸಭೆಯ ಸ್ವಚ್ಛತೆಯ ರಾಯಭಾರಿ ಪ್ರೊ. ತುಕಾರಾಮ ಪೂಜಾರಿ, ಸ್ವಚ್ಛತೆ ಎನ್ನುವುದು ಒಂದು ದಿನದ ಬಿರುಗಾಳಿಯಾಗುವ ಬದಲು ನಿತ್ಯ ನಿರಂತರ ಸುರಿಯುವ ಮುಂಗಾರು ಮಳೆಯಾಗಬೇಕು ಎಂದರು.

ಜಾಹೀರಾತು

ಪುರಸಭೆಯ ಅಧ್ಯಕ್ಷ ರಾಮಕೃಷ್ಣ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ ನಿರ್ಮಲ ಬಂಟ್ವಾಳ ಯೋಜನೆಯಡಿ ಬಂಟ್ವಾಳ ಪುರಸಭೆ ನಿರಂತರವಾಗಿ ಸ್ವಚತಾ ಕಾರ್ಯವನ್ನು ನಡೆಸಿಕೊಂಡು ಬರುತ್ತಿದೆ. ಹಲವಾರು ಸಂಘಟನೆಗಳು ಈ ಕಾರ್ಯಕ್ಕೆ ಸಹಕಾರ ನೀಡಿ ಪ್ರೋತ್ಸಾಹಿಸಿದೆ ಎಂದರು. ಪುರಸಭಾ ಸದಸ್ಯರಾದ ಇಕ್ಬಾಲ್ ಗೂಡಿನಬಳಿ ಹಾಗೂ ಸುಗುಣ ಕಿಣಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು ಸ್ವಾಗತಿಸಿ, ಮುಖ್ಯಾಧಿಕಾರಿ ಸುಧಾಕರ ಎಂ.ಎಚ್ ಪ್ರಸ್ತಾವಿಸಿದರು. ಸಮುದಾಯ ಅಧಿಕಾರಿ ಮತ್ತಡಿ ವಂದಿಸಿದರು. ರಾಜೀವ ಕಕ್ಕೆಪದವು ಕಾರ್ಯಕ್ರಮ ನಿರೂಪಿಸಿದರು. ಆರೋಗ್ಯಾಧಿಕಾರಿ ರತ್ನಪ್ರಸಾದ್ ಸಹಕರಿಸಿದರು. ಈ ಸಂದರ್ಭ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಗೂಡಿನಬಳಿ ವಾರ್ಡ್‌ನ್ನು  ಬಯಲು ಶೌಚ ಮುಕ್ತ ವಾರ್ಡನ್ನಾಗಿ ಗುರುತಿಸುವಲ್ಲಿ ಶ್ರಮಿಸಿದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಸಭಾ ಕಾರ್ಯಕ್ರಮಕ್ಕೆ ಮುಂಚಿತವಾಗಿ ತಾಲೂಕು ಕಚೇರಿ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿ.ಸಿ.ರೋಡಿನಲ್ಲಿ ಸ್ವಚ್ಛತಾ ಡ್ರೈವ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*