ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಯು.ಟಿ.ಖಾದರ್ ಶಿಫಾರಸಿನ ಮೇರೆಗೆ ಸಣ್ಣ ನೀರಾವರಿ ಇಲಾಖೆಯ ಮೂಲಕ 30ಲಕ್ಷ ವೆಚ್ಚದಲ್ಲಿ ಎಲದರ ಬಾವ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಕಿಂಡಿ ಅಣೆಕಟ್ಟುಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ, ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಎಸ್ ಗಟ್ಟಿ, ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಗ್ರಾಮ ಪಂಚಾಯತ್ ಸದಸ್ಯರಾದ ಮೊಯಿದಿನ್ ಕುಂಞ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅನಿಲ್ ಸೂತ್ರಬೈಲು, ಯುವ ಕಾಂಗ್ರೆಸ್ ಪದಾಧಿಕಾರಿ ಸಮೀರ್ ಪಜೀರ್ ಸಣ್ಣನೀರಾವರಿ ಇಲಾಖೆಯ ಶೇಷ ಕೃಷ್ಣ ಹಾಗೂ ರಘು, ಗುತ್ತಿಗೆದಾರ ಪೈಝಲ್, ಸ್ಥಳೀಯ ಗಣ್ಯರಾದ ಇಬ್ರಾಹಿಮ್ ಕುರಿಯಾಡಿ, ಪೂವಪ್ಪ ಬೆಳ್ಚಡ, ಜಯ, ಜಗನ್ನಾಥ ಶೆಟ್ಟಿ, ಅಬೂಬಕರ್, ಉಸ್ಮಾನ್ ಇನ್ನಿತರರು ಉಪಸ್ಥಿತರಿದ್ದರು.
ಇರಾ ಗ್ರಾಮದ ಕುಕ್ಕಾಜೆ ಬೈಲು ಪರಿಶಿಷ್ಟ ಜಾತಿ ಕಾಲನಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ ಹಾಗೂ ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಮಮತಾ ಗಟ್ಟಿಶಿಲಾನ್ಯಾಸಗೈದರು.
ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಗ್ರಾಮ ಪಂಚಾಯತ್ ಸದಸ್ಯೆ ಪಾರ್ವತಿ, ಸಮೀರ್ ಜಿಲ್ಲಾ ಪಂಚಾಯತ್ ಕಿರಿಯ ಅಭಿಯಂತರರಾದ ರವಿಚಂದ್ರ ಉಪಸ್ಥಿತಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…