ಬಂಟ್ವಾಳ: ಸಚಿವ ಮೇಟಿ ಪ್ರಕರಣ ನೋವು ತಂದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ನೋವು ವ್ಯಕ್ತಪಡಿಸಿದ್ದಾರೆ. ಆದರೆ ಇದು ಕಾಂಗ್ರೆಸ್ ಗೆ ಸಂಬಂಧಿಸಿದ ವಿಚಾರವಲ್ಲ.
ಹೀಗೆಂದು ಗುರುವಾರ ಅಭಿಪ್ರಾಯ ವ್ಯಕ್ತಪಡಿಸಿದವರು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್.
ಬಂಟ್ವಾಳ ತಾಲೂಕಿನ ಕಳ್ಳಿಗೆಯಲ್ಲಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಈಗಾಗಲೇ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿ, ರಾಜೀನಾಮೆ ಪಡೆದುಕೊಂಡಾಗಿದೆ. ಇದಕ್ಕೂ ಆಡಳಿತಕ್ಕೂ ಸಂಬಂಧ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಮುಂಬರುವ ಚುನಾವಣೆಗೆ ಈಗಾಗಲೆ ತಯಾರಿ ನಡೆಯುತ್ತಿದೆ. ಕಾಂಗ್ರೆಸ್ ಸಾಧನೆ ಪ್ರಚಾರ ಇದರ ಉದ್ದೇಶ ಎಂದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…