ಬಂಟ್ವಾಳ ಪುರಸಭಾ ವ್ಯಾಪ್ತಿಯ ಗಿರಿಗುಡ್ಡೆ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ರೂ.2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆವರಣಗೋಡೆ ಮತ್ತು ಅಗ್ರಾರ್ ಕೂಡು ರಸ್ತೆ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು. ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸದಸ್ಯರಾದ ಗಂಗಾಧರ ಪೂಜಾರಿ, ಜಗದೀಶ ಕುಂದರ್, ಬೂಡ ನಿಕಟಪೂರ್ವ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್, ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್, ಪ್ರಾಂಶುಪಾಲ ದೇವರಾಜ ನಾಯಕ್, ನಿಕಟಪೂರ್ವ ಪ್ರಾಂಶುಪಾಲ ಪ್ರೊ.ಎಚ್.ಸಿ.ಚಿನ್ನಗಿರಿ ಗೌಡ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಪಾಲಿಟೆಕ್ನಿಕ್ ಆವರಣಗೋಡೆ, ಅಗ್ರಾರ್ ಕೂಡು ರಸ್ತೆ ನಿರ್ಮಾಣಕ್ಕೆ ಗುದ್ದಲಿಪೂಜೆ"