ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಂಚಿಕಾರಕೂಟ್ಲು ಎಂಬಲ್ಲಿ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಸೇತುವೆಯನ್ನು ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶುಕ್ರವಾರ ಉದ್ಘಾಟಿಸಿದರು. ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸದಸ್ಯರಾದ ಜಗದೀಶ ಕುಂದರ್, ಚಂಚಲಾಕ್ಷಿ, ಬೂಡ ನಿಕಟಪೂರ್ವ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್, ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್ ಮತ್ತಿತರರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…