ಬಂಟ್ವಾಳ

ರಾಜ್ಯ ಮಟ್ಟದ ಬೃಹತ್ ಮೀಲಾದ್ ಮಹಫೀಝ್

www.bantwalnews.com report

ಕರ್ನಾಟಕ ರಾಜ್ಯ ದಾರಿಮಿ ಉಲಮಾ ಒಕ್ಕೂಟದ ವತಿಯಿಂದ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ.)ರವರ ಜನ್ಮ ದಿನಾಚರಣೆಯ ಪ್ರಯುಕ್ತ ರಾಜ್ಯ ಮಟ್ಟದ ಬೃಹತ್ ಮೀಲಾದ್ ಮಹಫೀಝ್ ಹಾಗೂ ಶೈಖುನಾ ಕುಮರಂ ಪುತ್ತೂರು ಉಸ್ತಾದ್‌ರವರ ಅನುಸ್ಮರಣಾ ಕಾರ್ಯಕ್ರಮ ಡಿಸೆಂಬರ್ 20ರಂದು ಬೆಳಗ್ಗೆ 9 ಗಂಟೆಗೆ ಪಾಣೆಮಂಗಳೂರು ಅಕ್ಕರಂಗಡಿ ಕೇಂದ್ರ ಜುಮಾ ಮಸೀದಿಯಲ್ಲಿ ಜರಗಲಿದೆ ಎಂದು ಅಕ್ಕರಂಗಡಿ ಜುಮಾ ಮಸೀದಿ ಕಾರ್ಯದರ್ಶಿ ಪಿ.ಜೆ.ಅಬ್ದುರ್ರಹ್ಮಾನ್ ತಿಳಿಸಿದರು.

ಬಿ.ಸಿ.ರೋಡ್ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಕರಂಗಡಿ ಜಮಾಅತ್‌ನ ಸಹಕಾರದೊಂದಿಗೆ ದಾರಿಮಿ ಉಲಮಾ ಒಕ್ಕೂಟದ ರಾಜ್ಯಾಧ್ಯಕ್ಷ ಎಸ್.ಬಿ.ಮುಹಮ್ಮದ್ ದಾರಿಮಿಯವರ ಅಧ್ಯಕ್ಷತೆಯಲ್ಲಿ ಜರಗಲಿರುವ ಈ ಕಾರ್ಯಕ್ರಮವನ್ನು ಕೆ.ಎಸ್.ಇಸ್ಮಾಯೀಲ್ ದಾರಿಮಿ ಅಕ್ಕರಂಗಡಿ ಉದ್ಘಾಟಿಸಲಿದ್ದು ಸೈಯ್ಯದ್ ಝೈನುಲ್ ಆಬಿದ್ ಜಿಫ್ರೀ ತಂಙಳ್ ದಾರಿಮಿ ಕಣ್ಣೂರು ದುಆ ನೆರವೇರಿಸಲಿದ್ದಾರೆ. ಪಿ.ಮಾಹಿನ್ ದಾರಿಮಿ ಪಾತೂರು ನೇತೃತ್ವದಲ್ಲಿ ದರ್ಗಾ ಶರೀಫ್ ಝಿಯಾರತ್ ನಡೆಯಲಿದ್ದು, ಅಲ್ ಹಾಜ್ ಬಿ.ಕೆ.ಅಬ್ದುಲ್ ಖಾದಿರ್ ಅಲ್ ಖಾಸಿಮಿ ಬಂಬ್ರಾಣ, ಅಲ್ ಹಾಜ್ ಕೆ.ಎಂ.ಉಸ್ಮಾನ್ ಫೈಝಿ ತೋಡಾರ್ ಮತ್ತು ಕೆ.ಪಿ.ಅಬ್ದುರ್ರಹ್ಮಾನ್ ದಾರಿಮಿ ಕಿನ್ಯ ತಬೂಕ್ ಮದ್ಹ್‌ರ್ರಸೂಲ್ ಭಾಷಣ ಮಾಡಲಿದ್ದಾರೆ. ಎ.ವಿ.ಅಬ್ದುರ್ರಹ್ಮಾನ್ ಮುಸ್ಲಿಯಾರ್ ನಂದಿ ಅನುಸ್ಮರಣಾ ಪ್ರಭಾಷಣ ಮಾಡಲಿದ್ದು ಲುಹರ್ ನಮಾಝ್‌ನ ಬಳಿಕ ಕೆ.ಪಿ.ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲ್ ಉಸ್ತಾದರ ನೃತೃತ್ವದಲ್ಲಿ ಮೌಲಿದ್ ಪಾರಾಯಣ ನಡೆಯಲಿದೆ ಎಂದರು.

ಜಾಹೀರಾತು

ಮುಖ್ಯ ಅತಿಥಿಗಳಾಗಿ ಕುಕ್ಕಿಲ ದಾರಿಮಿ, ಯು.ಕೆ.ದಾರಿಮಿ ಚೊಕ್ಕಬೆಟ್ಟು, ಅಕ್ಕರಂಗಡಿ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ಹಮೀದ್ ಬಾವುಂಞಿ, ಕಾರ್ಯದರ್ಶಿ ಪಿ.ಜೆ.ಅಬ್ದುಲ್ ರಹ್ಮಾನ್ ಭಾಗವಹಿಸಲಿದ್ದಾರೆ ಎಂದು ಅವರು ವಿವರ ನೀಡಿದರು.

ಸುದ್ದಿಗೋಷ್ಠಿಯಲ್ಲಿ ದಾರಿಮೀಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಕೆ.ವಿ.ಅಬ್ದುಲ್ ಮಜೀದ್ ದಾರಿಮಿ, ಖಾದರ್ ಮಾಸ್ಟರ್ ಬಂಟ್ವಾಳ, ಶುಕೂರ್ ದಾರಿಮಿ ಕರಾಯ, ಜಾಬೀರ್ ಫೈಝಿ ಬನಾರಿ, ಇಲ್ಯಾಸ್ ಅರ್ಶದಿ ಪೆರಿಯಪಾದೆ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts