bantwalnews.com report
ಬಂಟ್ವಾಳ ತಾಲೂಕು ಮಟ್ಟದ ಕರಾವಳಿ ಉತ್ಸವಕ್ಕೆ ಸೋಮವಾರ ಮಧ್ಯಾಹ್ನ ಚಾಲನೆ ನೀಡಲಾಯಿತು. ವೈಭವದ ಮೆರವಣಿಗೆಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಚಾಲನೆ ನೀಡಿದರು.
ಇದು ತಾಲೂಕಿನ ಸಾಂಸ್ಕೃತಿಕ ವೈಭವ ಪ್ರದರ್ಶಿಸಲೆಂದೇ ಮೀಸಲಾದ ಉತ್ಸವ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಭವನದಲ್ಲಿ ನಡೆಯುತ್ತದೆ.
ಮಂಗಳೂರು ಉಪವಿಭಾಗ ಸಹಾಯಕ ಆಯುಕ್ತ ಡಾ. ರೇಣುಕಾ ಪ್ರಸಾದ್,. ಜಿಪಂ ಸದಸ್ಯ ರವೀಂದ್ರ ಕಂಬಳಿ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಬಂಟ್ವಾಳ ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಬಂಗೇರ, ಮೆರವಣಿಗೆ ಸಮಿತಿ ಅಧ್ಯಕ್ಷ ಹಾಗೂ ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ತಾಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದಾ, ತಹಸೀಲ್ದಾರ್ ಪುರಂದರ ಹೆಗ್ಡೆ, ಸುದರ್ಶನ ಜೈನ್, ಲೋಕೋಪಯೋಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ಲೊಕೇಶ್, ಮಂಜು ವಿಟ್ಲ ಮೊದಲಾದವರು ಇದ್ದರು.
ಸಿಸಿ ಕ್ಯಾಮರಾ ಅಳವಡಿಸಿ, ಅಪರಿಚಿತರಿಗೆ ಬಾಗಿಲು ತೆಗೆಯಬೇಡಿ – ಪೊಲೀಸರ ಸಲಹೆ (more…)