ಬಂಟ್ವಾಳ

ಪೆರಿಯೋಡಿ ಬಳಿ ಕೃಷಿ ಗೋಡೌನ್ ಗೆ ಬೆಂಕಿ

bantwalnews.com report

ಬ್ರಹ್ಮರಕೂಟ್ಲು ಬಳಿ ಇರುವ ಪೆರಿಯೋಡಿ ಎಂಬಲ್ಲಿ ಕೃಷಿ ಗೋಡೌನ್ ಗೆ ಬೆಂಕಿ ವ್ಯಾಪಿಸಿ ಕೃಷಿಗೆ ಸಂಬಂಧಿಸಿದ ಹಲವು ಸೊತ್ತುಗಳು ಸುಟ್ಟು ಭಸ್ಮವಾಗಿದೆ.

ಜಾಹೀರಾತು

ಸೋಮನಾಥ ಮತ್ತು ಶ್ರೀಧರ ಎಂಬ ಸಹೋದರರು ವಾಸಿಸುವ ಮನೆ ಪಕ್ಕದಲ್ಲೇ ಕೃಷಿಗೆ ಸಂಬಂಧಿಸಿದ ವಸ್ತುಗಳನ್ನು ಇಡುವ ಕೊಟ್ಟಿಗೆ ಗೋಡೌನ್ ಇದೆ. ಸೋಮವಾರ ಮಧ್ಯಾಹ್ನದ ವೇಳೆಗೆ ಮಡ್ಡಿ ಮಾಡಲು ಬೇಯಿಸಿ ಹೊರಹೋಗಿದ್ದ ಸಂದರ್ಭ ಆಕಸ್ಮಿಕವಾಗಿ ಬೆಂಕಿ ಕೊಟ್ಟಿಗೆಗೆ ವ್ಯಾಪಿಸಿದೆ. ನೋಡನೋಡುತ್ತಿದ್ದಂತೆ ಗೋಡೌನಿಗೆ ಬೆಂಕಿ ಹರಡಿದೆ. ಕೂಡಲೇ ಬಂಟ್ವಾಳ ಅಗ್ನಿಶಾಮಕ ದಳ ಹಾಗೂ ಬಂಟ್ವಾಳ ನಗರ ಠಾಣಾ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಬಹುಪಾಲು ಕೊಟ್ಟಿಗೆ ಭಸ್ಮವಾಗಿತ್ತು. ಕೊಟ್ಟಿಗೆಯಲ್ಲಿಟ್ಟ ಬೈಹುಲ್ಲು, ಕೃಷಿಗೆ ಬೇಕಾದ ಸಲಕರಣೆಗಳ ಸಹಿತ ಹಲವು ಸೊತ್ತುಗಳು ಬೆಂಕಿಯಿಂದ ಸುಟ್ಟುಹೋಗಿದೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಸಾಗಿದೆ. ನಷ್ಟದ ಪ್ರಮಾಣ ಇನ್ನಷ್ಟೇ ಅಂದಾಜಿಸಬೇಕಾಗಿದೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ