ಫರಂಗಿಪೇಟೆ

ಫರಂಗಿಪೇಟೆ: ಸಾಮೂಹಿಕ ವಿವಾಹಕ್ಕೆ ಅರ್ಜಿ ಅಹ್ವಾನ

ಖಿದ್ ಮತುಲ್ ಇಸ್ಲಾಮ್ ಅಸೋಸಿಯೇಶನ್ ಫರಂಗಿಪೇಟೆ ಮತ್ತು ಮುಹಿಯುದ್ದೀನ್ ಜುಮಾ ಮಸೀದಿ ಫರಂಗಿಪೇಟೆ ಆಶ್ರಯದಲ್ಲಿ 10 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ 2017ರ ಫೆಬ್ರವರಿ 26ರಂದು ಫರಂಗಿಪೇಟೆಯಲ್ಲಿ ನಡೆಯಲಿದ್ದು ಅರ್ಹ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಿದೆ.
ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ವಧುವಿಗೆ 5 ಪವನ್ ಚಿನ್ನಾಭರಣ, 20 ಸಾವಿರ ರೂಪಾಯಿ ನಗದು, ಬುರ್ಖಾ, ಕೈ ಗಡಿಯಾರ ಹಾಗೂ ವರನಿಗೆ ವಸ್ತ್ರ, ಕೈಗಡಿಯಾರವನ್ನು ಉಚಿತವಾಗಿ ನೀಡಲಾಗುವುದು.
ಈ ಕಾರ್ಯಕ್ರಮದಲ್ಲಿ ವಿವಾಹವಾಗಳು ಇಚ್ಚಿಸುವವರು 2017ರ ಜನವರಿ 31ರ ಒಳಗೆ ಖಿದ್ ಮತುಲ್ ಇಸ್ಲಾಮ್ ಅಸೋಸಿಯೇಶನ್ ಫರಂಗಿಪೇಟೆ ಅಥವಾ ಮುಹಿಯುದ್ದೀನ್ ಜುಮಾ ಮಸೀದಿ ಫರಂಗಿಪೇಟೆ ಇದರ ಸಂಬಂಧಿಸಿದ ಪದಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ನಡೆಸಿದ ಬಳಿಕ ಅರ್ಹ 10 ಜೋಡಿ ಫಲಾನುಭವಿಗಳನ್ನು ಸಂಘಟಕರು ಆಯ್ಕೆ ಮಾಡಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9845815033, 9916072059 ಸಂಪರ್ಕಿಸುವಂತೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಫ್.ಉಮರ್ ಫಾರೂಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts