bantwalnews.com report
ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಭಕ್ತರ ಕೂಡುವಿಕೆಯಲ್ಲಿ ಡಿ. 22ರಂದು ಬೆಳಗ್ಗೆ 9ಕ್ಕೆ ಸಾಮೂಹಿಕ ಸಂಕಲ್ಪ, ಗಣಹೋಮ ಹಾಗೂ ಏಕಾದಶ ರುದ್ರ ನಡೆಯಲಿದೆ.
ಕಾರ್ಯಕ್ರಮದಲ್ಲಿ ಬೆಳಗ್ಗೆ ಸಾಮೂಹಿಕ ಸಂಕಲ್ಪ, ನಿಽ ಕುಂಭ ಸಂಚಯ, ಗಣಹೋಮ, ಏಕಾದಶ ರುದ್ರ, ಮಹಾಪೂಜೆ, ಅನ್ನಸಂತರ್ಪಣೆ ಜರಗಲಿದೆ. ಮಧ್ಯಾಹ್ನ 12ಕ್ಕೆ ಧಾರ್ಮಿಕ ಸಭೆಯಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಸಂಸದ ನಳಿನ್‌ಕುಮಾರ್ ಕಟೀಲು, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಪ್ರಗತಿಪರ ಕೃಷಿಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಡಾ| ಎಚ್.ಶಂಕರನಾರಾಯಣ ರಾವ್ ಹಲ್ಸನಾಡು, ಜಿ.ಪಂ.ಸದಸ್ಯ ಬಿ.ಪದ್ಮಶೇಖರ್ ಜೈನ್, ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಸಂಚಾಲಕ ಡಾ| ಎಂ.ಮೋಹನ ಆಳ್ವ, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ, ಆಡಳಿತ ಮೊಕ್ತೇಸರ ಎನ್.ಸುಬ್ಬಣ್ಣ ಶೆಟ್ಟಿ ಭಾಗವಹಿಸಲಿದ್ದಾರೆ.
ಸಂಜೆ ಸರಪಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಪ್ರದರ್ಶನಗೊಳ್ಳಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಂ.ಎಸ್.ಶೆಟ್ಟಿ ಸರಪಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.