ಪ್ರತಿಭಾ ಪ್ರದರ್ಶನಕ್ಕೆ ಶಾಲಾ ವೇದಿಕೆ ಉತ್ತಮ ತಳಹದಿ

bantwalnews.com

ಭಾರತೀಯ ಸನಾತನ ಸಂಸ್ಕೃತಿಯಿಂದ ಬೆಳೆದು ಬಂದ ಸಂಗೀತ, ನೃತ್ಯಗಳಂತ ಕಲೆಗಳನ್ನು ಪ್ರೊತ್ಸಾಹಿಸಬೇಕು.  ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಶಾಲಾ ವೇದಿಕೆಯೇ ಉತ್ತಮ ತಳಹದಿಯನ್ನು ಒದಗಿಸುತ್ತದೆ. ದೊರಕಿದ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬಿ.ಸಿ.ರೋಡಿನ ವೈದ್ಯರಾದ ಡಾ.ಎಂ.ಎಸ್.ಭಟ್ ಹೇಳಿದರು.

ಅವರು ಇಲ್ಲಿನ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಸಂಗೀತ ನೃತ್ಯ ಕಾರ್‍ಯಕ್ರಮ ಸಂಸ್ಕೃತಿಯನ್ನು ಉದ್ದೇಶಿಸಿ ಮಾತನಾಡಿದರು. ಕಾರ್‍ಯಕ್ರಮದ ಮುಖ್ಯ ಅತಿಥಿಯಾಗಿದ್ದ ಬಂಟ್ವಾಳ ತಾಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ ಮಾತನಾಡಿ ವಿದ್ಯಾರ್ಥಿಗಳು ಸಂಸ್ಕಾರಗಳನ್ನು ಎಳವೆಯಲ್ಲಿಯೇ ಕಲಿಯಬೇಕು.  ಮಾತೃ ದೇವೋ ಭವ ಪಿತೃ ದೇವೋ ಭವ ಎಂಬ ಭಾವನೆಯನ್ನು ಹೊಂದಿರಬೇಕು ಎಂದರು.  ಶಾಲಾ ಪ್ರಾಂಶುಪಾಲೆ ರಮಾಶಂಕರ್ ಸಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭಾ ಕಾರ್‍ಯಕ್ರಮದ ನಂತರ ಶಾಸ್ತ್ರೀಯ ಸಂಗೀತ, ಭರತನಾಟ್ಯ, ವಯೊಲೀನ್ ವಾದನ, ಹಾಮೋರ್ನಿಯಂ ವಾದನ, ಯಕ್ಷಗಾನ ಕಾರ್‍ಯಕ್ರಮಗಳು ನಡೆದವು.  9ನೇ ತರಗತಿಯ ಆಶಲ್ ಮಿನೇಜಸ್, ಜೆನಿವಾ ವೆಸ್ಲಿಯಾ ಕಾರ್‍ಯಕ್ರಮ ನಿರ್ವಹಿಸಿದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ.
  

  

1 Comment on "ಪ್ರತಿಭಾ ಪ್ರದರ್ಶನಕ್ಕೆ ಶಾಲಾ ವೇದಿಕೆ ಉತ್ತಮ ತಳಹದಿ"

  1. Avatar ಎಚ್. ಸುಂದರ ರಾವ್ | December 21, 2016 at 9:33 am | Reply

    ಸಂಗೀತ, ನೃತ್ಯಗಳೊಂದಿಗೆ ಭಾಷೆಗೆ ಬೇರ್ಪಡಿಸಲಾಗದ ಸಂಬಂಧವಿದೆ. ನಾವು ನಮ್ಮ ಭಾಷೆಯನ್ನು ಬಿಡುತ್ತಿದ್ದೇವೆ; ಇಂಗ್ಲೀಷನ್ನು ಹಿಡಿಯುತ್ತಿದ್ದೇವೆ. ನೃತ್ಯ,ಸಂಗೀತ ಇತ್ಯಾದಿಗಳನ್ನು “ಭಾರತೀಯ ಪರಂಪರೆ”ಯ ಹೆಸರಿನಲ್ಲಿ ಉಳಿಸಿಕೊಳ್ಳಬೇಕು ಎನ್ನುತ್ತೇವೆ. ಇದು ಸಾಧ್ಯವೆ? ನನಗೆ ಅನುಮಾನವಿದೆ.

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*