ಸಜಿಪಮೂಡ ಗ್ರಾಮಸಭೆಯಲ್ಲಿ ಮಾತಿನ ಚಕಮಕಿ, ಗ್ರಾಮಸ್ಥರ ಧರಣಿ

ಸಜಿಪಮೂಡ ಗ್ರಾಮಸಭೆಯಲ್ಲಿ ತಾಪಂ ಸದಸ್ಯರಾಡಿದ ಮಾತಿಗೆ ಕ್ಷಮೆ ಕೋರಲು ಒತ್ತಾಯಿಸಿ, ಬಿಜೆಪಿ ನೇತೃತ್ವದಲ್ಲಿ ಗ್ರಾಮಸ್ಥರು ಗ್ರಾಪಂ ಕಚೇರಿಯೊಳಗೆ ಪ್ರತಿಭಟನೆ ನಡೆಸಿದರು.

ಮಂಗಳವಾರ ಗ್ರಾಮಸಭೆ ಗಣಪತಿ ಭಟ್ ಅಧ್ಯಕ್ಷತೆಯಲ್ಲಿ ನಡೆದಿದ್ದು, ವಿಷಯವೊಂದಕ್ಕೆ ಸಂಬಂಧಿಸಿ ಚರ್ಚೆ ನಡೆದಾಗ ತಾಪಂ ಸದಸ್ಯ ಸಂಜೀವ ಪೂಜಾರಿ ತನ್ನ ಕುರಿತು ಆಡಿತ ಮಾತಿಗೆ ಕ್ಷಮೆ ಕೋರಬೇಕು ಎಂದು ಅಯ್ಯಪ್ಪ ವ್ರತಧಾರಿಯೂ ಆಗಿರುವ ಗ್ರಾಮಸ್ಥ ಸತೀಶ್ ಪೂಜಾರಿ ಒತ್ತಾಯಿಸಿದರು. ಅವರನ್ನು ಬೆಂಬಲಿಸಿ, ಗ್ರಾಮಸ್ಥರಿಂದ ಸ್ಥಳದಲ್ಲೇ ಧರಣಿ ನಡೆಯಿತು. ಅವರ ಬೆಂಬಲಕ್ಕೆ ಆಗಮಿಸಿದ ಮಾಜಿ ತಾ.ಪಂ. ಅಧ್ಯಕ್ಷ ಯಶವಂತ ಡಿ, ಯುವಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ, ಬಿಜೆಪಿ ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಪ್ರತಿಭಟನೆಗೆ ಸಾಥ್ ನೀಡಿದರು. ಸುದ್ದಿ ತಿಳಿದ  ಬಂಟ್ವಾಳ ನಗರ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ಈ ಕುರಿತು ಸತೀಶ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಸಜಿಪಮೂಡ ಗ್ರಾಮಸಭೆಯಲ್ಲಿ ಮಾತಿನ ಚಕಮಕಿ, ಗ್ರಾಮಸ್ಥರ ಧರಣಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*