ವಿಟ್ಲ

ಮಿತ್ತನಡ್ಕ ಹಲ್ಲೆ ಆರೋಪಿಗಳ ಬಂಧನ

bantwalnews.com report

ಕರೋಪಾಡಿ ಗ್ರಾಮದ ಮಿತ್ತನಡ್ಕದಲ್ಲಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದ ಆರೋಪಿಗಳನ್ನು ವಿಟ್ಲ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಜಾಹೀರಾತು

 

 

 

 

ಮಿತ್ತನಡ್ಕ ದೇವಸ್ಯ ನಿವಾಸಿಗಳಾದ ಅಬ್ದುಲ್ ನವಾಫ್ (19), ಮಹಮ್ಮದ್ ಸಜಾಫ್(20), ಇಬ್ರಾಹಿಂ ಖಲೀಲ್(20) ಬಂಧಿತ ಆರೋಪಿಗಳಾಗಿದ್ದಾರೆ. ಮಿತ್ತನಡ್ಕದಲ್ಲಿ ಶನಿವಾರ ಶನಿ ಪೂಜಾ ಕಾರ್ಯಕ್ರಮಕ್ಕಾಗಿ ಶುಕ್ರವಾರ ಜಾಗ ಸ್ವಚ್ಛ ಮಾಡಿಟ್ಟಿದ್ದ ಜಾಗದಲ್ಲಿ ಬೈಕ್ ಚಲಾಯಿಸಿ ದೂಳೆಬ್ಬಿಸದಂತೆ ಮನವಿ ಮಾಡಿದ ರಾಜೇಶ್ ನಾಯಕ್ ಎಂಬವರಿಗೆ ಹಲ್ಲೆ ನಡೆಸಿದ ಆರೋಪ ಈ ಮೂವರ ಮೇಲಿದೆ. ಆರೋಪಿಗಳನ್ನು ಬಂಧಿಸದೇ ಇದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಹಿಂದೂ ಜಾಗರಣಾ ವೇದಿಕೆ ಹೇಳಿತ್ತು.

ಪರಿಸ್ಥಿತಿ ವಿಕೋಪಕ್ಕೆ ತೆರಳುವ ಸೂಚನೆ ಲಭಿಸುತ್ತಿದ್ದಂತೆ ಪೊಲೀಸ್ ಇಲಾಖೆ ಜಾಗೃತವಾಗಿ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಸಹಾಯಕ ಅಧೀಕ್ಷಕ ರವೀಶ್ ಸಿ.ಆರ್, ಬಂಟ್ವಾಳ ವೃತ್ತನಿರೀಕ್ಷ ಮಂಜಯ್ಯ, ವಿಟ್ಲ ಉಪನಿರೀಕ್ಷಕ ನಾಗರಾಜ್ ಅವರನ್ನೊಳಗೊಂಡ ಪೊಲೀಸರ ತಂಡ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts