ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ ನಡೆಸದಂತೆ ಕೆಲವು ಮಂದಿ ಕಿಡಿಗೇಡಿಗಳು ವಿರೋಧ ವ್ಯಕ್ತಪಡಿಸಿದ ಘಟನೆ ಕನ್ಯಾನದಲ್ಲಿ ಗುರುವಾರ ನಡೆದಿದೆ.
ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸುವ ಉದ್ದೇಶದಿಂದ ಗುರುವಾರ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿತ್ತು. ಮಧ್ಯಾಹ್ನ 3ರಿಂದ 4ಗಂಟೆವರೆಗೆ ಶಾಲೆಯ 6 ಮಂದಿ ಉತ್ಸಾಹೀ ವಿದ್ಯಾರ್ಥಿಗಳನ್ನೇ ತರಬೇತಿಗೊಳಿಸಿ ಸುದರ್ಶನ ವಿಜಯ ಯಕ್ಷಗಾನ ಕಾರ್ಯಕ್ರಮ ನಿಗದಿ ಮಾಡಲಾಗಿತ್ತು. ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಹೊರಗಿನಿಂದ ಬಂದ ಕೆಲವು ಕಿಡಿಗೇಡಿಗಳು ಯಕ್ಷಗಾನ ನಿಲ್ಲಿಸುವಂತೆ ಕಾರ್ಯಕ್ರಮ ವ್ಯವಸ್ಥಾಪಕರಲ್ಲಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಕೊನೆಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಜೆ 5.30ಕ್ಕೆ ಮುಗಿಸಿದರು.