ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ನಾಪತ್ತೆಯಾಗಿದ್ದ ಅಪ್ರಾಪ್ತೆಯನ್ನು ವಿಟ್ಲ ಪೊಲೀಸರ ತಂಡ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ಸಮೀಪ ಪತ್ತೆ ಹಚ್ಚಿದ ಘಟನೆ ಶುಕ್ರವಾರ ನಡೆದಿದೆ.
ಪೆರುವಾಯಿ ಗ್ರಾಮದ 17 ವರ್ಷದ ಯುವತಿ ಡಿ.11ರಂದು ಮನೆಯಿಂದ ವಿಟ್ಲ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದು ಬಳಿಕ ಮನೆಗೆ ಹಿಂದಿರುಗಿರಲಿಲ್ಲ. ಈ ಬಗ್ಗೆ ಠಾಣೆಗೆ ದೂರು ನೀಡಲಾಗಿತ್ತು. ಯುವತಿ ದೂರವಾಣಿ ಟವರ್ ಲೊಕೇಶ್ ಆಧಾರದಲ್ಲಿ ತನಿಖೆ ಆರಂಭಿಸಿದ ಪೊಲೀಸ್ವರು, ಯುವತಿಯನು ಚಾಮರಾಜ ನಗರ ಜಿಲ್ಲೆಯ ಕೊಳ್ಳೆಗಾಲ ಮುಳ್ಳೂರು ಎಂಬಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ವಿಟ್ಲ ಠಾಣೆಯ ಉಪನಿರೀಕ್ಷಕ ನಾಗರಾಜ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಪ್ರವೀಣ್ ರೈ, ಭವಿತ್ ರೈ ಕಾರ್ಯಾಚರಣೆ ನಡೆಸಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ನಾಪತ್ತೆಯಾದ ಯುವತಿ ಪತ್ತೆ"