ವಿಟ್ಲ ಪಟ್ಟಣ ಪಂಚಾಯಿತಿ ವತಿಯಿಂದ ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಬಯಲು ಶೌಚಾಲಯ ನಿಷೇಧಿತ ಪ್ರದೇಶ ಕಾರ್ಯಕ್ರಮದ ಪ್ರಯುಕ್ತ ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ಬೀದಿನಾಟಕ ನಡೆಯಿತು.
ವಿಟ್ಲ ಸರ್ಕಾರಿ ಶಾಲೆ ಹಾಗೂ ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೀದಿನಾಟಕ ಪ್ರದರ್ಶನಗೊಂಡಿತು. ವಿಟ್ಲ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಅಧ್ಯಕ್ಷ ಅರುಣ ವಿಟ್ಲ, ಸದಸ್ಯರಾದ ರಾಮ್‍ದಾಸ್ ಶೆಣೈ, ಲೋಕನಾಥ ಶೆಟ್ಟಿ ಕೊಲ್ಯ, ಉಷಾ ಕೆ ಕಂದಾಯ ನಿರೀಕ್ಷಕ ಪಕೀರ ಮೂಲ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಜಾನ್ ಡಿ ಸೋಜ, ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಜಯಪ್ರಸಾದ್, ಅಭಿಲಾಷ್, ಜೀವನ್, ಸೂರಾಜ್, ಶಿವಪ್ರಸಾದ್, ಶಿವಪ್ಪ, ಚರಣ್, ನಂದನ್, ಅರುಣ್, ಚೈತ್ರಾ, ಅಶ್ವಿನಿ ಮಾಲಾಶ್ರೀ ನಾಟಕದಲ್ಲಿ ಭಾಗವಹಿಸಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಬೀದಿನಾಟಕ"