ವಿಟ್ಲ

ಗೌಡರ ಯಾನೆ ಒಕ್ಕಲಿಗರ ಸಂಘದ ವತಿಯಿಂದ ಗುರುವಂದನಾ ಕಾರ್ಯಕ್ರಮ

ವಿಟ್ಲ ಶಾಂತಿನಗರ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ವತಿಯಿಂದ ವಿಟ್ಲದ ಶಾಂತಿನಗರ ಅಕ್ಷಯ ಸಭಾಭವನದಲ್ಲಿ ಡಿ.31ರಂದು ಶ್ರೀ ಸತ್ಯನಾರಾಯಣ ಪೂಜೆ ಮತ್ತು ಗುರುವಂದನಾ ಕಾರ್ಯಕ್ರಮ ನಡೆಯಲಿದೆ.

ಬಂಟ್ವಾಳ ತಾಲೂಕಿಗೆ ಪ್ರಥಮ ಬಾರಿಗೆ ಆಗಮಿಸಲಿರುವ ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಅನುಗ್ರಹ ಸಂದೇಶ ನೀಡಲಿದ್ದಾರೆ ಎಂದು ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ. ಲಿಂಗಪ್ಪ ಗೌಡ ಅಳಿಕೆ ಹೇಳೀದರು.
ಪ್ರಥಮ ಬಾರಿಗೆ ಬಂಟ್ವಾಳ ತಾಲೂಕಿಗೆ ಆಗಮಿಸುತ್ತಿರುವ ಸ್ವಾಮೀಜಿಯವರನ್ನು ಕಬಕದಲ್ಲಿ ಮಧ್ಯಾಹ್ನ 2.30ಕ್ಕೆ ಸ್ವಾಗತ ಮಾಡಿಕೊಳ್ಳಲಿದ್ದು, ದ್ವಿಚಕ್ರ ವಾಹನಗಳು, ಇತರ ಲಘು ವಾಹನಗಳು, ಬಣ್ಣದ ಕೊಡೆಗಳು, ಯಕ್ಷಗಾನ ವೇಷಗಳು, ಕೀಲು ಕುದುರೆ, ಕರಗ ಗೊಂಬೆಗಳು, ಚೆಂಡೆ, ಮಂಗಳವಾದ್ಯಗಳು, ಕೊಂಬು, ನವಿಲು, ಬ್ಯಾಂಡ್ ಸೆಟ್ ಮೊದಲಾದಗಳನ್ನೂಳಗೊಂಡ ಮೆರವಣಿಗೆಗಳು ನಡೆಯಲಿದೆ. 2.45ರಿಂದ ವಿಟ್ಲ ಮೇಗಿನಪೇಟೆ ಜೈನಬಸದಿಯ ಬಳಿಯಿಂದ ಕಾಲ್ನಡಿಗೆಯ ಮೂಲಕಶ್ರೀ ಪಂಚಲಿಂಗೇಶ್ವರದೇವಾಲಯಕ್ಕೆ ತೆರಳಿ ಅಲ್ಲಿಂದ ವಿಟ್ಲ ಅರಮನೆಯ ಅರಸರಾದ ಜನಾರ್ಧನ ವರ್ಮ ಅರಸರನ್ನು ಕರೆದುಕೊಂಡು ಅಕ್ಷಯ ಸಮುದಾಯ ಭವನಕ್ಕೆ ಮೆರವಣಿಗೆ ಸಾಗಲಿದೆ ಎಂದು ವಿಟ್ಲ ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಆದಿಚುಂಚನಗಿರಿ ಶಾಖಾಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಉಪಸ್ಥಿತಿ ಇರಲಿದ್ದು, ಬಂಟ್ವಾಳ ತಾಲ್ಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಲಿಂಗಪ್ಪ ಗೌಡ ಅಳಿಕೆ ಅಧ್ಯಕ್ಷ ವಹಿಸಲಿದ್ದಾರೆ.

ವಿಟ್ಲ ಅರಮನೆಯ ಅರಸರಾದ ಜನಾರ್ಧನ ವರ್ಮ ಅರಸರಿಗೆ ಗೌರವಾರ್ಪಣೆ ಮಾಡಲಾಗುವುದು. ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ, ಸುಳ್ಯ ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್‍ನ ಅಧ್ಯಕ್ಷ ಡಾ.ಕೆ.ವಿ ಚಿದಾನಂದ ಗೌಡ ಕುರುಂಜಿ, ದಕ್ಷಿಣ ಕನ್ನಡ ಹಾಗೂ ಕೊಡಗು ಗೌಡ ಅಭಿವೃದ್ಧಿ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸಂಘದ ಅಧ್ಯಕ್ಷ ವಾಸುದೇವ ಗೌಡ, ಪುತ್ತೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಗಂಗಾಧರ ಗೌಡ ಕೆಮ್ಮಾರ, ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಸೋಮೇ ಗೌಡ, ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ದಿನೇಶ್ ಮಡಪ್ಪಾಡಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.
ಕೋಶಾಧಿಕಾರಿ ಮೋಹನ್ ಕಾಯಾರ್ ಮಾರ್, ಸಂಘಟನಾ ಕಾರ್ಯದರ್ಶಿ ಕೇಶವ ಗೌಡ ಎ ಕೆಲಿಂಜ, ಗೌರವ ಸಲಹೆಗಾರ ಗಿರಿಯಪ್ಪ ಗೌಡ, ಕಾನೂನು ಸಲಹೆಗಾರ ಮಹೇಶ್ ವಸಂತಮಹಲ್, ಯುವ ವೇದಿಕೆಯ ಅಧ್ಯಕ್ಷ ವಿನಯ್ ಎಸ್, ಮೆರವಣಿಗೆ ಸಮಿತಿಯ ಸಂಕಪ್ಪ ಗೌಡ ಕೆ.ಎಸ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.