500 ಮತ್ತು 1000ರೂ ನೋಟುಗಳ ನಿಷೇಧ, ಭಾರತದ ಆರ್ಥಿಕ ಕ್ರಾಂತಿಗೆ ನಾಂದಿಯಾಗಲಿದ್ದು ಆರ್ಥಿಕ ಆಡಳಿತ ನಿರ್ವಹಣೆಯಲ್ಲಿ ಒಂದು ದಿಟ್ಟ ಹೆಜ್ಜೆ ಎಂದು ಪುತ್ತೂರು ವಿವೇಕಾನಂದ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ, ಆರ್ಥಿಕ ತಜ್ಞ ಡಾ| ವಿಘ್ನೇಶ್ ವರ್ಮುಡಿ ಹೇಳಿದರು.
ಅವರು ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಪ್ರಬೋಧ ವಾಠಣಿಜ್ಯ ಸಂಘ ಹಾಗೂ ಶ್ರೀರಾಮ ಸೌಹಾರ್ದ ಸಹಕಾರಿ ಸಂಘದ ಆಶ್ರಯದಲ್ಲಿ ಮಂಗಳವಾರ ನಡೆದ ಆರ್ಥಿಕ ಕ್ರಾಂತಿ 2016 ಒಂದು ವಿಮರ್ಶೆ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ, ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ ಉಪಸ್ಥಿತರಿದ್ದರು. ಪದವಿ ವಿಭಾಗದ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‍ಕಟ್ಟೆ ಸ್ವಾಗತಿಸಿದರು. ಉಪನ್ಯಾಸಕ ರಂಜಿತ್ ವಂದಿಸಿ, ಉಪನ್ಯಾಸಕಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳೂ ಸೇರಿದಂತೆ 440ಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.