ವಿಟ್ಲ

ಆಹ್ವಾನಿತ ತಂಡಗಳ ಮ್ಯಾಟ್ ಕಬಡ್ಡಿ

ಕಂಬಳಬೆಟ್ಟು ಸೌಹಾರ್ದ ಫ್ರೆಂಡ್ಸ್‍ನ ದಶಮಾನೋತ್ಸವದ ಪ್ರಯುಕ್ತ ಕಂಬಳಬೆಟ್ಟು ಶಾಂತಿನಗರದಲ್ಲಿ ಡಿ.25ರಂದು ನಡೆಯುವ ಆಹ್ವಾನಿತ ತಂಡಗಳ  ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಭರ್ಜರಿಯ ಸಿದ್ದತೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ನಡೆಯುವ ಕಬಡ್ಡಿ ಪಂದ್ಯಾಟದಲ್ಲಿ 18 ತಂಡಗಳ ನಡುವೆ ಹಣಾ ಹಣಿ ನಡೆಯಲಿದೆ. ಪ್ರತಿ ತಂಡದಲ್ಲಿ ಇಬ್ಬರು ರಾಜ್ಯ ಮಟ್ಟದ ಆಟಗಾರರಿಗೆ ಆಡಲು ಅವಕಾಶವನ್ನೂ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲೇ ಮೊದಲ ಬಾರಿಗೆ ತರ್ಡ್ ಅಂಪೈಯರ್ ವ್ಯವಸ್ಥೆಯನ್ನು ಇಲ್ಲಿ ಮಾಡಲಾಗಿದ್ದು, ಯಾವುದೇ ಗೊಂದಲವಾದರೂ ಕ್ಯಾಮರಾಗಳು ಹದ್ದಿನ ಕಣ್ಣಿಡಲಿದೆ. ವಿಶೇಷ ರೀತಿಯಲ್ಲಿ ನಡೆಯುವ ಪದ್ಯಾಂಟ ವೀಕ್ಷಿಸಲು ಸುಮಾರು 1500 ಮಂದಿಗೆ ಗ್ಯಾಲರಿಯ ವ್ಯವಸ್ಥೆ ಮಾಡಲಾಗಿದೆ. ಇದರ ಹೊರತಾಗಿಯೂ 2ಸಾವಿರ ಆಸನದ ವ್ಯವಸ್ಥೆ ಇರಲಿದೆ.
ಸಂಘ ಸಂಸ್ಥೆಗಳ ಹಾಗೂ ಸಾರ್ವಜನಿಕರ ಸಹಕಾರದಲ್ಲಿ ನಡೆಯುವ ಕಬಡ್ಡಿಗೆ ಭರರ್ಜರಿಯ ತಯಾರಿ ನಡೆದಿದೆ. ಡಿ.25ರಂದು ಸಂಜೆ 4 ಗಂಟೆಗೆ ಪಂದ್ಯಾಟದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ನಡೆಸಲಿದ್ದು, ಅಧ್ಯಕ್ಷತೆಯನ್ನು ಪುತ್ತೂರು ಶಾಸಕಿ ಶಕುಂತಳಾ ಟಿ ಶೆಟ್ಟಿ ವಹಿಸಲಿದ್ದಾರೆ.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts