ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಹಾಗೂ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಉಸ್ತುವಾರಿ ಮತ್ತು ಜಾಗೃತಿ ಸಮಿತಿ ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ತಮ್ಮ ಇಲಾಖಾವಾರು ಮಾಹಿತಿಯನ್ನು ನೀಡಬೇಕೆಂದು ಮಂಗಳೂರು ಸಹಾಯಕ ಆಯುಕ್ತ ರೇಣುಕಾಪ್ರಸಾದ್ ತಾಕೀತು ಮಾಡಿದ್ದಾರೆ.
ಶನಿವಾರ ಬಿ.ಸಿ.ರೋಡಿನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆದ ಮಂಗಳೂರು ಕಂದಾಯ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಉಪಯೋಜನೆ ಕಾರ್ಯಕ್ರಮಗಳ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗೈರುಹಾಜರಾಗುವ ತಾಲೂಕು ಮಟ್ಟದ ಅಧಿಕಾರಿಗಳು ಸೂಕ್ತ ಕಾರಣ ನೀಡಬೇಕು. ಇಲ್ಲದಿದ್ದಲ್ಲಿ ಅವರ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಸಿದರಲ್ಲದೆ ಅಧಿಕಾರಿಗಳು ಇಚ್ಛಾಶಕ್ತಿಯಿಂದ ತಮ್ಮ ಕೆಲಸವನ್ನು ಮಾಡುವುದೇ ಆ ವರ್ಗಕ್ಕೆ ನೀಡುವ ಗೌರವವಾಗಿದೆ ಎಂದು ತಿಳಿಸಿದರು.
ಬಿ.ಸಿ.ರೋಡಿನ ಸಂಚಾರಿ ಆಸ್ಪತ್ರೆಯ ಡಿ’ಗ್ರೂಪ್ ನೌಕರನೊಬ್ಬನ ಕಾರುಬಾರು ಅತಿಯಾಗಿದ್ದು, ಆತ ತಾಲೂಕು ಆರೋಗ್ಯ ಅಧಿಕಾರಿಯವರ ಮಾತಿಗೆ ಬೆಲೆ ನೀಡುತ್ತಿಲ್ಲ. ಈತನನ್ನು ಕೆಲಸದಿಂದಲೇ ವಜಾ ಮಾಡಬೇಕು ಎಂದು ಸದಸ್ಯ ಜನಾರ್ದನ ಚೆಂಡ್ತಿಮಾರ್ ಅವರು ಸಭೆಯ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯಾಧಿಕಾರಿ ದೀಪಾ ಪ್ರಭುರವರು ಈ ಡಿ’ಗ್ರೂಪ್ ನೌಕರನ ಮೇಲೇ ಈಗಾಗಲೇ ದೋಷಾರೋಪಣ ಪಟ್ಟಿಯ ಸಹಿತ ಶಿಸ್ತು ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಶಿಫಾರಸು ಮಾಡಲಾಗಿದೆ. ಮುಂದಿನ ವಾರ ಈತನ ಮೇಲೆ ಕ್ರಮ ಜರಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್eನ್ಯ ಕಾಯ್ದೆಯಡಿ 24 ಪ್ರಕರಣಗಳ ಪೈಕಿ ನಾಲ್ಕು ಪ್ರಕರಣದಲ್ಲಿ ಪರಿಹಾರಕ್ಕಾಗಿ ಸಂಬಂಧಪಟ್ಟ ಇಲಾಖೆಗೆ ಡಿವೈಎಸ್ಪಿ ರವೀಶ್ ಅವರು ಶಿಫಾರಸು ಮಾಡಿದ್ದಾರೆ ಎಂದು ಬಂಟ್ವಾಳ ಪೆÇಲೀಸ್ ಇನ್ಸ್ಪೆಕ್ಟರ್ ಬಿ.ಕೆ.ಮಂಜಯ್ಯ ಅವರು ತಿಳಿಸಿದರು. ಜಿಲ್ಲಾ ಮಟ್ಟದಲ್ಲಿ ಪೆÇಲೀಸ್ ಇಲಾಖೆ ನಡೆಸುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಭೆಯಲ್ಲಿ ಪೆÇಲೀಸ್ ದೌರ್ಜನ್ಯ ವಿಚಾರಕ್ಕೆ ಸಂಬಂಧಿಸಿ ಮಾತ್ರ ಚರ್ಚೆ ನಡೆಯಬೇಕು ಎಂದು ಸದಸ್ಯ ಜನಾರ್ದನ ಚೆಂಡ್ತಿಮಾರ್ ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಹಾಯಕ ಆಯುಕ್ತರು ಪೆÇಲೀಸ್ ಇಲಾಖೆ ಎಲ್ಲಾ ವಿಚಾರಗಳ ಬಗ್ಗೆ ಅಹವಾಲು ಸ್ವೀಕರಿಸಬೇಕಾಗುತ್ತದೆ. ಬಳಿಕ ಅದನ್ನು ಪರಿಹಾರಕ್ಕೆ ಸಂಬಂಧಿಸಿದ ಇಲಾಖೆಗೆ ರವಾನಿಸುವ ಕಾರ್ಯವನ್ನು ಪೆÇಲೀಸ್ ಇಲಾಖಾ ಮುಖ್ಯಸ್ಥರು ಮಾಡಬೇಕಾಗುತ್ತದೆ ಎಂದು ತಿಳಿಸಿದರು. ಕೃಷಿ ಇಲಾಖೆಯಿಂದ ಪವರ್ ಟಿಲ್ಲರ್ ವಿತರಿಸುವ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಪ.ಜಾ ಮತ್ತು ಪಂಗಡದ ಹೆಸರಿನಲ್ಲಿ ಇನ್ಯಾರೋ ಪಡೆದುಕೊಳ್ಳುತ್ತಿದ್ದಾರೆ ಎಂದು ಸದಸ್ಯ ಜನಾರ್ದನ ಚೆಂಡ್ತಿಮಾರ್ ಗಮನ ಸೆಳೆದರು. ಇಂತಹ ಪ್ರಕರಣಗಳಿದ್ದರೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಹಾಯಕ ಆಯುಕ್ತರು ಸೂಚಿಸಿದರು. ಹಾಗೆಯೇ ಡಿ.ಸಿ. ಮನ್ನಾ ಜಾಗವನ್ನು ಅತಿಕ್ರಮಣ ಗೊಳಿಸಿರುವುದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ತಹಶೀಲ್ದಾರ್ ಪುರಂದರ ಹೆಗ್ಡೆ ಹೇಳಿದರು. ಸಮಾಜ ಕಲ್ಯಾಣ ಇಲಾಖೆ ಮ್ಯಾನೇಜರ್ ವಿನಯ ಕುಮಾರಿ ಉಪಸ್ಥಿತರಿದ್ದರು.
Be the first to comment on "ಸಭೆಗೆ ಹಾಜರಾತಿ ಕಡ್ದಾಯ: ಸಹಾಯಕ ಆಯುಕ್ತ ತಾಕೀತು"