ವಾಜಪೇಯಿ ಜನ್ಮದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ಶಿಬಿರ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ 92 ನೇ ಜನ್ಮದಿನಾಚರಣೆಯ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಬಿಜೆಪಿಯ ವತಿಯಿಂದ ವೈದ್ಯಕೀಯ ಪ್ರಕೋಷ್ಟದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಪೊಳಲಿಯ ಸರ್ವಮಂಗಳ ಸಭಾಭವನದಲ್ಲಿ ನಡೆಯಿತು.

ರಾಜೇಶ್ ನಾಯ್ಕ್ ಉಳಿಪ್ಪಾಡಿ ದೀಪ ಬೆಳಗಿಸಿ ಶಿಬಿರ ಉದ್ಘಾಟಿಸಿದರು. ರಾಜ್ಯ ಬಿಜೆಪಿ ಸಹ ವಕ್ತಾರೆ ಸುಲೋಚನಾ ಜಿ.ಕೆ. ಭಟ್ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು. ಕ್ಷೇತ್ರಾಧ್ಯಕ್ಷ ಬಿ. ದೇವದಾಸ್ ಶೆಟ್ಟಿ, ನಾಯಕರಾದ ವೆಂಕಟೇಶ್ ನಾವಡ, ದೇವಪ್ಪ ಪೂಜಾರಿ, ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ,  ಯಶವಂತ ಪೊಳಲಿ, ಚಂದ್ರಿಕಾ, ವೈದ್ಯಕೀಯ ಪ್ರಕೋಷ್ಟದ ಡಾ.ಸುಕೇಶ್, ಡಾ. ಬಾಲಕೃಷ್ಣ, ಜಿ.ಆನಂದ, ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಗಣೇಶ್ ರೈ, ಅಬ್ದುಲ್ ರಜಾಕ್ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರಿನ ಪ್ರಸಿದ್ದ ತಜ್ಞ ವೈದ್ಯರುಗಳಾದ ಡಾ.ಸಂತೋಷ್ ಪೈ, ಡಾ.ಗಿರೀಶ್, ಡಾ.ಪ್ರಶಾಂತ್ ಆಚಾರ್, ಡಾ.ರವೀಂದ್ರ, ಡಾ.ಗಣೇಶ್ ಕಾಮತ್, ಡಾ.ಅಶ್ವಿನ್ ಬಾಳಿಗಾ ಪಾಲ್ಗೊಡಿದ್ದರು. ಒಟ್ಟು 129 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಾಜಪೇಯಿ ಜನ್ಮದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ಶಿಬಿರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*