ಬಂಟ್ವಾಳ

ಅನ್ವೇಷಣಾ -2016 ರಾಜ್ಯಮಟ್ಟದ ಕಾರ್ಯಾಗಾರ

ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಪಡೆಯುವ ಹಂತದಲ್ಲಿ ನಿರ್ದಿಷ್ಟ ಗುರಿಯನ್ನು ಇಟ್ಟುಕೊಳ್ಳಬೇಕು. ನಿರಂತರ ಪರಿಶ್ರಮದ ಮೂಲಕ ಗುರಿಯನ್ನು ಮುಟ್ಟಲು ಸಾಧ್ಯ. ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಅನ್ವೇಷಣಾ –2016 ನಂತಹ ಕಾರ್ಯಾಗಾರಗಳ ಅಗತ್ಯತೆ ಇದೆ ಎಂದು ಕಕ್ಯಪದವಿನ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಸಂಸ್ಥಾಪಕ ರೋಹಿನಾಥ ಪಾದೆ ಅಭಿಪ್ರಾಯಪಟ್ಟರು.

ಅವರು ಬಿ.ಸಿ.ರೋಡು ಗಾಣದಪಡ್ಪುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ  ಯುವವಾಹಿನಿ(ರಿ)ಬಂಟ್ವಾಳ ತಾಲೂಕು ಘಟಕದ ವತಿಯಿಂದ  ನಡೆದ ಅನ್ವೇಷಣಾ-2016′ ಶೈಕ್ಷಣಿಕ, ವೃತ್ತಿಮಾರ್ಗದರ್ಶನ ಕುರಿತ ರಾಜ್ಯಮಟ್ಟದ ಒಂದು ದಿನದ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಜಾಹೀರಾತು

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಅನ್ವೇಷಣಾ-2016 ನ್ನು ಉದ್ಘಾಟಿಸಿದರು. ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಪ್ರಧಾನ ಕಾರ್ಯದರ್ಶಿ ಬಿ.ತಮ್ಮಯ್ಯ ಶುಭಾಶಂಸನೆ ಗೈದರು. 

ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ  ಅಧ್ಯಕ್ಷೆ  ಭಾರತಿ ಬಿ.ಕುಂದರ್, ಬಿಲ್ಲವ ಮಹಾಮಂಡಲದ ವಕ್ತಾರ ಹರಿಕೃಷ್ಣ ಬಂಟ್ವಾಳ ಮತ್ತು ಆರಾಧನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಕೋರ್ಯ ವೇದಿಕೆಯಲ್ಲಿದ್ದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರಸಮಿತಿಯ ವ್ಯಕ್ತಿತ್ವ ವಿಕಸನ ನಿರ್ದೇಶಕ ಗೋಪಾಲಕೃಷ್ಣ ಕುಂದರ್ ವಹಿಸಿದ್ದರು.

ಅನ್ವೇಷಣಾ –2016 ಕಾರ್ಯಾಗಾರದ ಸಂಯೋಜಕ ಚೇತನ್ ಎಂ., ಹಾಗೂ ವಿದ್ಯಾರ್ಥಿ ಸಂಘಟನೆಯ ನಿರ್ದೇಶಕ ವಿಜಿತ್ ಕೋಟ್ಯಾನ್,ಯುವವಾಹಿನಿ ಬಂಟ್ವಾಳ ತಾಲೂಕು  ಘಟಕದ ಅಧ್ಯಕ್ಷ ಅರುಣ್ ಕುಮಾರ್, ಕೋಶಾಧಿಕಾರಿ ಸತೀಶ್ ಪೂಜಾರಿ ಬಾಯಿಲ, ಕಾರ್ಯಾಗಾರದ ಸಹಸಂಚಾಲಕರಾದ ನಿತಿನ್ ಎಚ್.ಯು., ಕಿರಣ್ ರಾಜ್ ಪೂಂಜೆರಕೋಡಿ, ಉಪನ್ಯಾಸಕ ಶಿವಪ್ರಸಾದ್ ಉಪಸ್ಥಿತರಿದ್ದರು. 

ಯುವವಾಹಿನಿ ಮಾಜಿ ಅಧ್ಯಕ್ಷ  ಪ್ರೇಮನಾಥ ಕೆ ಸ್ವಾಗತಿಸಿದರು. ನಿಕಟಪೂರ್ವ ಅಧ್ಯಕ್ಷ ರಾಜೇಶ್ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಸಹನಾ ಪ್ರಾರ್ಥಿಸಿದರು. ಯುವವಾಹಿನಿಯ ಜತೆಕಾರ್ಯದರ್ಶಿ ಜಯಶ್ರೀ ಕರ್ಕೇರ  ಧನ್ಯವಾದಗೈದರು. ಯುವವಾಹಿನಿ  ಮಾಜಿ ಅಧ್ಯಕ್ಷ ಹರೀಶ್ ಎಸ್  ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

8 hours ago