ದೇಶದ ಯುವಜನತೆ ದಾರಿ ತಪ್ಪಿದರೆ ಇಡೀ ರಾಷ್ಟ್ರ ಅಧಃಪತನದ ಕಡೆಗೆ ಸರಿಯುತ್ತದೆ ಎಂದು ಕಲಾವಿದ ಉದಯ ಕುಮಾರ್ ಜ್ಯೋತಿಗುಡ್ಡೆ ಅಭಿಪ್ರಾಯ ಪಟ್ಟರು.
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ರೆಡ್ ರಿಬ್ಬನ್ ಕ್ಲಬ್ ವತಿಯಿಂದ ನಡೆದ ಏಡ್ಸ್ ಜಾಗೃತಿ ಅರಿವು ಕಾರ್‍ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.
ಜಾಹೀರಾತು
ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಅಧ್ಯಕ್ಷತೆ ವಹಿಸಿ ಏಡ್ಸ್ ಕುರಿತಾದ ಜಾಗೃತಿ ಮೂಡಿಸುವಲ್ಲಿ ಯುವಜನರ ಪಾಲ್ಗೊಳ್ಳುವಿಕೆ ಅತೀ ಮುಖ್ಯ ಎಂದರು.
ರೆಡ್ ರಿಬ್ಬನ್ ಕ್ಲಬ್‌ನ ಸಂಯೋಜಕ ಪ್ರದೀಪ್ ಪೂಜಾರಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಚೇತನ್ ಮುಂಡಾಜೆ ಅತಿಥಿ ಪರಿಚಯಿಸಿದರು.
ವಿದ್ಯಾರ್ಥಿನಿಯರಾದ ಅಕ್ಷತ ಮತ್ತು ಮಾನಸ ಪ್ರಾರ್ಥಿಸಿದರು. ವಿದ್ಯಾರ್ಥಿನಿ ರಕ್ಷಾ ಜೈನ್ ಕೆ. ವಂದಿಸಿ, ವಿದ್ಯಾರ್ಥಿನಿ ಅನನ್ಯ ಜಿ. ಕಾರ್ಯಕ್ರಮ ನಿರೂಪಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಏಡ್ಸ್ ಅರಿವು ಜಾಗೃತಿ ಕಾರ್ಯಕ್ರಮ"