ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ವಾರ್ಷಿಕ ಶಿಬಿರ ನಗ್ರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆರಂಭಗೊಂಡಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಪಂಚಾಯಿತಿ ಸದಸ್ಯ ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಸಜಿಪಮೂಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣಪತಿ ಎನ್.ಕೆ., ಕಾಲೇಜಿನ ಪ್ರಾಂಶುಪಾಲ ಡಾ. ಅಜಕ್ಕಳ ಗಿರೀಶ ಭಟ್, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸದಾಶಿವ ಬಂಗೇರ ಸಹಿತ ಹಲವು ಗಣ್ಯರು ಈ ಸಂದರ್ಭ ಹಾಜರಿದ್ದರು.