ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಮಗ್ರಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯಡಿ ಜಕ್ರಿಬೆಟ್ಟು ಸಮೀಪ ಹೊಸದಾಗಿ ನಿರ್ಮಿಸಲಾಗುತ್ತಿರುವ ಜಲ ಶುದ್ಧೀಕರಣ ಘಟಕದ ಬಳಿ ಹೊಸ ಕೊಳವೆ ಮಾರ್ಗಗಳನ್ನು ಅಳವಡಿಸುವ ಕಾಮಗಾರಿ ಇನ್ನೂ ಜಾರಿಯಲ್ಲಿದ್ದು, ನೀರು ಪೂರೈಕೆ ವ್ಯತ್ಯಯ ಇನ್ನೂ ಒಂದು ದಿನ ಮುಂದುವರಿಯಲಿದೆ.
ಡಿಸೆಂಬರ್27ರಿಂದ 29ವರೆಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಬಳಕೆದಾದರು ಸಹಕರಿಸಬೇಕು ಎಂದು ಪುರಸಭೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿತ್ತು. ಆದರೆ ಕಾಮಗಾರಿ ಇನ್ನೂ ಮುಗಿಯದ ಹಿನ್ನೆಲೆಯಲ್ಲಿ ಶುಕ್ರವಾರವೂ ಪುರಸಭೆ ವ್ಯಾಪ್ತಿಯಲ್ಲಿ ನೀರಿಗೆ ಅಡಚಣೆ ಉಂಟಾಗಲಿದೆ, ಸಾರ್ವಜನಿಕರು ಸಹಕರಿಸಬೇಕು ಎಂದು ಒಳಚರಂಡಿ ಮಂಡಳಿ ಇಂಜಿನಿಯರ್ ಶೋಭಲಕ್ಷ್ಮಿ ಬಂಟ್ವಾಳನ್ಯೂಸ್ ಗೆ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಶುಕ್ರವಾರವೂ ನೀರು ಪೂರೈಕೆ ಅಡಚಣೆ"
Be the first to comment on "ಶುಕ್ರವಾರವೂ ನೀರು ಪೂರೈಕೆ ಅಡಚಣೆ"