ವಿದ್ಯಾಗಿರಿಯ ಬಿ.ಆರ್.ಎಂ.ಪಿ ಶಾಲೆಯಲ್ಲಿ ದಶಮಾನೋತ್ಸವದ ಸಂಭ್ರಮ

ಹೆತ್ತವರು ತಮ್ಮ ಮಕ್ಕಳೊಡನೆ ಸಮಯ ಕಳೆಯಲು ಸಿದ್ಧರಿರಬೇಕು. ಅವರನ್ನು ಪ್ರೀತಿ ವಾತ್ಸಲ್ಯಗಳಿಂದ ಪೋಷಿಸಿ, ಆದರೆ ನಿಮ್ಮ ಅತಿಯಾದ ಪ್ರೀತಿಯೇ ಅವರಿಗೆ ಮುಳುವಾಗಬಾರದು ಎಂದು ಕಣಚ್ಚೂರು ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲ ಸಿ.ಹೆಚ್.ರಾಮಚಂದ್ರ ಭಟ್ ಹೇಳಿದರು.

ಜಾಹೀರಾತು

ಬಂಟ್ವಾಳ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ದಶಮಾನೋತ್ಸವ ಸಮಾರಂಭ ’ಸಂಭ್ರಮ’ದ ಸಭಾ ಕಾರ್‍ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

ಜಾಹೀರಾತು

ಶಾಲಾ ಸಂಚಾಲಕ ಭಾಮಿ ವಿಠಲ್‌ದಾಸ್ ಶೆಣೈ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಮಲ್ಯ, ಪ್ರಾಂಶುಪಾಲೆ ಶ್ರೀಮತಿ ರಮಾಶಂಕರ್ ಸಿ ಉಪಸ್ಥಿತರಿದ್ದರು. ಕಳೆದ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸಭಾ ಕಾರ್‍ಯಕ್ರಮದ ನಂತರ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ಶಾಂತಿ ಮತ್ತು ಸಾಮರಸ್ಯದ ಧ್ಯೇಯವನ್ನು ಪ್ರತಿಬಿಂಬಿಸುವ ಹಲವು ಸಾಂಸ್ಕೃತಿಕ ಕಾರ್‍ಯಕ್ರಮಗಳು ಜರುಗಿದವು. ಶಾಲಾನಾಯಕಿ ಆತ್ಮಿ ಪಿ ಭಂಡಾರಿ, ಉಪನಾಯಕ ಅನಂತ್ ರಾಹುಲ್ ಸೋಮಯಾಜಿ ಕಾರ್‍ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಜೂಲಿ ಟಿ ಜೆ ಸ್ವಾಗತಿಸಿ, ಉಷಾ ಬಿ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ವಿದ್ಯಾಗಿರಿಯ ಬಿ.ಆರ್.ಎಂ.ಪಿ ಶಾಲೆಯಲ್ಲಿ ದಶಮಾನೋತ್ಸವದ ಸಂಭ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*