ಬಂಟ್ವಾಳ

ರಸ್ತೆ ಸುಸ್ಥಿತಿಗೆ ತರದಿದ್ದರೆ ಜ.2ರಂದು ಹೆದ್ದಾರಿ ತಡೆ

ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದ ಸಮೀಪ ರಸ್ತೆಯ ಎರಡೂ ಬದಿಯನ್ನು ಅಗಲೀಕರಣಗೊಳಿಸುವ ನಿಟ್ಟಿನಲ್ಲಿ ರಸ್ತೆ ಅಗೆದು ಒಂದೂವರೆ ತಿಂಗಳು ಕಳೆದೂ ಇನ್ನೂ ಕೂಡ ಸುಸ್ಥಿತಿಗೆ ತಾರದಿರುವ ರಾ.ಹೆದ್ದಾರಿ ಇಲಾಖೆಯ ಕಾರ್ಯವೈಖರಿಯನ್ನು ಖಂಡಿಸಿ ಜ.2 ರಂದು ಹೆದ್ದಾರಿ ತಡೆಗೊಳಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಪಿಎ ರಹೀಂ ಅವರು ತಿಳಿಸಿದ್ದಾರೆ.

ಬಂಟ್ವಾಳ ತಹಶೀಲ್ದಾರ್, ಪುರಸಭೆ ಹಾಗೂ ಪೊಲೀಸ್ ಇಲಾಖೆಗೆ ಕೈಕಂಬ ಅಂಗಡಿ ಮಾಲಕರ  ಹಾಗೂ ರಿಕ್ಷಾ ಚಾಲಕರ ನಿಯೋಗವೊಂದು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ.

ಜಾಹೀರಾತು

 ಹತ್ತು ದಿನಗಳ ಹಿಂದೆಯಷ್ಟೇ ಸ್ಥಳೀಯ ಅಂಗಡಿ ಮಾಲಕರು ಹಾಗೂ ರಿಕ್ಷಾ ಚಾಲಕರು ಅಗೆದು ಹಾಕಿರುವ ರಸ್ತೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು. ಈ ಸಂದರ್ಭ ಸ್ಥಳಕ್ಕಾಗಮಿಸಿದ ತಹಶೀಲ್ದಾರ್ ಅವರು ಎರಡು ಮೂರು ದಿನಗಳ ಒಳಗಾಗಿ ಸರಿಪಡಿಸುವ ಭರವಸೆ ನೀಡಿದ್ದರು, ಆದರೆ ಅದು ಈವರೆಗೂ ಈಡೇರದ ಹಿನ್ನೆಲೆಯಲ್ಲಿ ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗಿದೆ, ಜನವರಿ ಎರಡರಂದು ಸ್ಥಳೀಯ ವಿವಿಧ ಶಾಲಾ ಮಕ್ಕಳು, ಸಾರ್ವಜನಿಕರು, ರಿಕ್ಷಾಚಾಲಕರ ಸಹಕಾರದೊಂದಿಗೆ ರಸ್ತೆತಡೆ  ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಅಗೆದ ರಸ್ತೆಯನ್ನು ಸುಸ್ಥಿತಿಗೆ ತರುವ ವಿಚಾರದಲ್ಲಿ ಇಲಾಖೆಗಳ ನಡುವೆ ಸಮನ್ವತೆಯ ಕೊರತೆ ಇದ್ದು, ಸಾರ್ವಜನಿಕರು ಇದರಿಂದ ತೊಂದರೆ ಅನುಭವಿಸಬೇಕಾಗಿದೆ. ಸಚಿವರ ಸಹಿತ ವಿವಿಧ ಜನಪ್ರತಿನಿಧಿಗಳು ಇದೇ ದಾರಿಯಾಗಿ ಓಡಾಡುತ್ತಿದ್ದರೂ, ಈ ರಸ್ತೆಯ ಬಗ್ಗೆ ಸಂಬಂಧಪಟ್ಟ ಇಲಾಖೆಯ ಕಿವಿ ಹಿಂಡುವ ಕೆಸಲ ಮಾಡುತ್ತಿಲ್ಲ ಎಂದು ಆರೋಪಿಸಿದ ಅವರು, ತಹಶೀಲ್ದಾರರು ಪುರಸಭೆಯತ್ತ ಬೊಟ್ಟು ಮಾಡಿದರೆ, ಪುರಸಭೆ ಟ್ರಾಫಿಕ್  ಎಸೈ ಚಂದ್ರಶೇಖರಯ್ಯ ರವರೆ ಮೇಲೆ ಬೆರಳು ತೋರಿಸುತ್ತಿದ್ದು, ಪ್ರಮುಖವಾಗಿ ಇದರ ಕಾರ್ಯನಿರ್ವಹಿಸಬೇಕಾಗಿದ್ದ ಹೆದ್ದಾರಿ ಇಲಾಖೆ ಇತ್ತ ತಲೆಹಾಕಿ ಮಲಗುತ್ತಿಲ್ಲ ಎಂದವರು ಆರೋಪಿಸಿದರು.  ಕೈಕಂಬ ರಿಕ್ಷಾಚಾಲಕ ಸಂಘದ ಅಧ್ಯಕ್ಷ ಯಾಕೂಬು, ಪ್ರಮುಖರಾದ ಶಾಹುಲ್ ಹಮೀದ್, ಕೆ.ಹೆಚ್.ಅಬೂಬಕರ್, ಅಜರುದ್ದೀನ್ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts