ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಉದಯ ಚೌಟ ಹೇಳಿದರು.
ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ದಶಮಾನೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಕ್ರೀಡಾಕೂಟ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಮಲ್ಯ, ಶಾಲಾ ಪ್ರಾಂಶುಪಾಲೆ ರಮಾ ಶಂಕರ್ ಸಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೂರ್ವಾಹ್ನ ಪೋಷಕರಿಗಾಗಿ ಮನರಂಜನಾ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪೋಷಕರಿಗೂ ವಿದ್ಯಾರ್ಥಿಗಳಿಗೂ ಬಹುಮಾನ ವಿತರಿಸಲಾಯಿತು. 8ನೇ ತರಗತಿಯ ತರುಣ್ ಹೊಳ್ಳ, ಅಪೂರ್ವ ನಾಯಕ್ ಕಾರ್‍ಯಕ್ರಮ ನಿರ್ವಹಿಸಿದರು. ರಿಹಾಮ ಖೌಲ ಸ್ವಾಗತಿಸಿ, ಸೂರ್‍ಯಕಾಂತ್ ವಂದಿಸಿದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…