ಪುರಸಭೆಯನ್ನು ಬಯಲು ಶೌಚ ಮುಕ್ತ ಪ್ರದೇಶವೆಂದು ಘೋಷಣೆ ಮಾಡುವ ಉದ್ದೇಶದಿಂದ ಎಲ್ಲಾ ಮನೆಗಳು ಶೌಚಾಲಯ ಹೊಂದಿರಬೇಕೆಂದು ಪುರಸಭೆ ಸಂಕಲ್ಪ ಮಾಡಿದನ್ವಯ ಬಂಟ್ವಾಳ ಪುರಸಭಾ ಬಿ.ಕಸ್ಬಾ ಗ್ರಾಮದ 2ನೇ ವಾರ್ಡಿನ ಜಕ್ರಿಬೆಟ್ಟು ಎಂಬಲ್ಲಿಯ ಶಾಂತ ಎಂಬವರಿಗೆ ಪುರಸಭಾ ನಿಧಿಯಿಂದ ರೂ.10 ಸಾವಿರ ಸಹಾಯಧನವನ್ನು ಶೌಚಾಲಯ ನಿರ್ಮಾಣಕ್ಕೆ ನೀಡಲಾಗಿದೆ. ಪುರಸಭಾ ಸದಸ್ಯ ಗಂಗಾಧರ ಅವರ ನೇತೃತ್ವದಲ್ಲಿ ಕೆಳಗಿನ ಮಂಡಾಡಿಯ ಮಹಮ್ಮಾಯಿ ಫ್ರೆಂಡ್ಸ್ ಸಹಕಾರದೊಂದಿಗೆ ಶ್ರಮದಾನದ ಮೂಲಕ ಹಾಗೂ ಉಳಿದ ಮೊತ್ತವನ್ನು ಸಂಗ್ರಹಿಸಿ ಒಟ್ಟು 30 ಸಾವಿರ ರುಪಾಯಿ ವೆಚ್ಚದಲ್ಲಿ ಶೌಚಾಲಾಯ ನಿರ್ಮಿಸಿಕೊಡಲಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಶೌಚಾಲಯ ನಿರ್ಮಾಣಕ್ಕೆ ಸಹಾಯ"