ಓದು ಮತ್ತು ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಮಹತ್ವ ನೀಡಿದಾಗ ಉಜ್ವಲ ಭವಿಷ್ಯ ರೂಪಿಸಲು ಸಾಧ್ಯ ಎಂದು ಮಂಗಳೂರು ವಿಶ್ವ ವಿದ್ಯಾಲಯದ ರಿಜಿಸ್ಟ್ರಾರ್ ಡಾ. ಎ.ಎಂ.ಖಾನ್ ಹೇಳಿದರು.
ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ನಡೆದ 8ನೆ ವಾರ್ಷಿಕೋತ್ಸವ ಹಾಗೂ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು ವ್ಯಕ್ತಿತ್ವ ವಿಕಾಸ ಮತ್ತು ಸನ್ನಡತೆಯನ್ನು ವಿದ್ಯಾರ್ಥಿ ಜೀವನದಲ್ಲೇ ಮೈಗೂಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಮೆಲ್ಕಾರ್ ವುಮೆನ್ಸ್ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿನಿಯರು ಇತರ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿನಿಯರಿಗೆ ಮಾದರಿಯಾಗುವಂತಿರಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನ ವಿತರಿಸಿ ಗೌರವಿಸಿದರು. ಕಾಲೇಜಿನ ಸಭಾಂಗಣದಲ್ಲಿ ಕೆ.ಎಸ್.ಯಾಸರ್ ಕಲ್ಲಡ್ಕ ಅವರಿಂದ ಪುರಾತನ ವಸ್ತುಗಳು, 194 ದೇಶದ ನೋಟು ಹಾಗೂ ನಾಣ್ಯಗಳು, ರಾಜ್ಯಡಳಿತದ ಕಾಲದ ನಾಣ್ಯಗಳ ವಸ್ತು ಪ್ರದರ್ಶನ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಚೆರ್‌ಮೆನ್ ಎಸ್.ಎಂ.ರಶೀದ್ ಹಾಜಿ ವಹಿಸಿದ್ದರು. ಫಿಝಾ ಗ್ರೋಪ್‌ನ ಅಧ್ಯಕ್ಷ ಬಿ.ಎಂ.ಫಾರೂಕ್, ನೂರುಲ್ ಹುದಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬದ್ರುದ್ದೀನ್ ಪಣಂಬೂರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಕಾಲೇಜಿನ ಟ್ರಸ್ಟಿ ಎಸ್.ಅಬ್ಬಾಸ್, ಝಕಾರಿಯಾ ಜೋಕಟ್ಟೆ, ಹಮೀದ್ ಉಪಸ್ಥಿತರಿದ್ದರು.
ಪ್ರಾಂಶುಪಾಲ ಬಿ.ಕೆ.ಅಬ್ದುಲ್ ಲತೀಫ್ ಕಾಲೇಜಿನ ವರದಿ ಮಂಡಿಸಿದರು. ವಿದ್ಯಾರ್ಥಿನಿ ಖತೀಜ ಸ್ವನೂಫಾ ಸ್ವಾಗತಿಸಿದರು. ಅವ್ವಾ ಆಬಿದ ವಂದಿಸಿದರು. ನಶತ್ ಮೀಝಾ ಕಾರ್ಯಕ್ರಮ ನಿರೂಪಿಸಿದರು.