ಬಂಟ್ವಾಳ

ರೈತರ ಸಮಸ್ಯೆ ಕುರಿತು ಜಿಲ್ಲಾಧಿಕಾರಿಯೊಂದಿಗೆ ಬಿಜೆಪಿ ಚರ್ಚೆ

ದಕ್ಷಿಣ ಕನ್ನಡ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಅವರನ್ನು ಭೇಟಿ ಮಾಡಿ ಚರ್ಚಿಸಿತು.

ಕೊಳವೆ ಬಾವಿ ಕೊರೆಯುವುದನ್ನು ನಿಷೇಧಿಸಿ ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ತುಂಬೆ ವೆಂಟೆಡ್ ಡ್ಯಾಂ ನಿಂದ ಸಂತ್ರಸ್ತರಾಗುವ ರೈತರಿಗೆ ಕೇಂದ್ರ ಸರಕಾರದ ಜಲ ಆಯೋಗದ ನೀತಿಯಂತೆ ಪರಿಹಾರವನ್ನು ನೀಡಬೇಕು. ಅಡಿಕೆಗೆ ಕೇಂದ್ರ ಸರಕಾರ ರೂ.160 ಕೋಟಿ ಬೆಂಬಲ ಬೆಲೆ ಘೋಷಿಸಿದ್ದು ರಾಜ್ಯ ಸರಕಾರ ತನ್ನ ಪಾಲಿನ ಶೇ. 50  ಪಾಲನ್ನು ಬಿಡುಗಡೆಗೊಳಿಸಬೇಕು. ಮುಂತಾದ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚಿಸಿ ಮನವಿಯನ್ನು ಅರ್ಪಿಸಲಾಯಿತು.

ಜಾಹೀರಾತು

ಜಿಲ್ಲಾಧ್ಯಕ್ಷರಾದ ಸಂಜೀವ ಮಠಂದೂರು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,  ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ  ಉಮಾನಾಥ ಕೋಟ್ಯಾನ್,  ಕಿಶೋರ್ ರೈ, ಬೃಜೇಶ್ ಚೌಟ, ಸುದರ್ಶನ್ ಎಂ, ಪ್ರಮುಖರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಜೀವ್ ಭಂಡಾರಿ,  ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಬಾಣಜಾಲು, ಬಂಟ್ವಾಳ ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಸುರೇಶ್ ಆಳ್ವ  ಈ ಸಂಧರ್ಭ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ