ದಕ್ಷಿಣ ಕನ್ನಡ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಅವರನ್ನು ಭೇಟಿ ಮಾಡಿ ಚರ್ಚಿಸಿತು.
ಕೊಳವೆ ಬಾವಿ ಕೊರೆಯುವುದನ್ನು ನಿಷೇಧಿಸಿ ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ತುಂಬೆ ವೆಂಟೆಡ್ ಡ್ಯಾಂ ನಿಂದ ಸಂತ್ರಸ್ತರಾಗುವ ರೈತರಿಗೆ ಕೇಂದ್ರ ಸರಕಾರದ ಜಲ ಆಯೋಗದ ನೀತಿಯಂತೆ ಪರಿಹಾರವನ್ನು ನೀಡಬೇಕು. ಅಡಿಕೆಗೆ ಕೇಂದ್ರ ಸರಕಾರ ರೂ.160 ಕೋಟಿ ಬೆಂಬಲ ಬೆಲೆ ಘೋಷಿಸಿದ್ದು ರಾಜ್ಯ ಸರಕಾರ ತನ್ನ ಪಾಲಿನ ಶೇ. 50 ಪಾಲನ್ನು ಬಿಡುಗಡೆಗೊಳಿಸಬೇಕು. ಮುಂತಾದ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚಿಸಿ ಮನವಿಯನ್ನು ಅರ್ಪಿಸಲಾಯಿತು.
ಜಿಲ್ಲಾಧ್ಯಕ್ಷರಾದ ಸಂಜೀವ ಮಠಂದೂರು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಉಮಾನಾಥ ಕೋಟ್ಯಾನ್, ಕಿಶೋರ್ ರೈ, ಬೃಜೇಶ್ ಚೌಟ, ಸುದರ್ಶನ್ ಎಂ, ಪ್ರಮುಖರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಾಜೀವ್ ಭಂಡಾರಿ, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಬಾಣಜಾಲು, ಬಂಟ್ವಾಳ ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಸುರೇಶ್ ಆಳ್ವ ಈ ಸಂಧರ್ಭ ಉಪಸ್ಥಿತರಿದ್ದರು.
Be the first to comment on "ರೈತರ ಸಮಸ್ಯೆ ಕುರಿತು ಜಿಲ್ಲಾಧಿಕಾರಿಯೊಂದಿಗೆ ಬಿಜೆಪಿ ಚರ್ಚೆ"