ಜಿಲ್ಲಾ ಸುದ್ದಿ

ಡಾ.ಕೆ.ಚಿನ್ನಪ್ಪ ಗೌಡ 21ನೇ ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷ

  • 27, 28, 29ರಂದು ಉಜಿರೆಯಲ್ಲಿ ನಡೆಯುವ ಸಮ್ಮೇಳನ
  • ಕನ್ನಡ-ತುಳು ಸಾಹಿತ್ಯ, ಜಾನಪದ ವಿದ್ವಾಂಸ ಡಾ. ಚಿನ್ನಪ್ಪಗೌಡ

 ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಕುಲಪತಿ, ಬಂಟ್ವಾಳ ತಾಲೂಕಿನ ವಿಟ್ಲ ಕಸಬಾ ಗ್ರಾಮದ ಕುಡೂರಿನ ಡಾ. ಕೆ. ಚಿನ್ನಪ್ಪ ಗೌಡ ದಕ್ಷಿಣ ಕನ್ನಡ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಜನಾರ್ದನ ದೇವಸ್ಥಾನ ಆವರಣದಲ್ಲಿ ಸಮ್ಮೇಳನ ನಡೆಯಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಉಜಿರೆ ಜನಾರ್ದನ ದೇವಳದ ಧರ್ಮದರ್ಶಿಗಳಾದ ವಿಜಯ ರಾಘವ ಪಡುವೆಟ್ನಾಯ ಅವರ ಅಧ್ಯಕ್ಷತೆಯಲ್ಲಿ ಪ್ರೊ. ಪ್ರಭಾಕರ, ಡಿ. ಹರ್ಷೇಂದ್ರ ಕುಮಾರ್, ತಾಲೂಕು ಸಾಹಿತ್ಯ ಪರಿಷತ್ತುಅಧ್ಯಕ್ಷ ಡಾ. ಯಶೋವರ್ಮ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಸ್ವಾಗತ ಸಮಿತಿಯಉಸ್ತುವಾರಿಯಲ್ಲಿಕೆಲಸಕಾರ್ಯಗಳು ಈಗಾಗಲೇ ಭರದಿಂದ ಸಾಗುತ್ತಿವೆ ಎಂದು ದ. ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್.  ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನಪದ ಸಾಹಿತ್ಯ ಹಾಗೂ ಸಾಂಸ್ಕೃತಿಕ ಅಧ್ಯಯನ ಸಹಿತ ವಿಶೇಷವಾಗಿ, ಹಳೆಗನ್ನಡ ಮತ್ತುಆಧುನಿಕ ಕನ್ನಡ, ತುಳು ಭಾಷಾ ಅಧ್ಯಯನ ನಡೆಸಿರುವ ಡಾ. ಕೆ. ಚಿನ್ನಪ್ಪ ಗೌಡರು, ಭೂತಾರಾಧನೆ- ಕೆಲವು ಅಧ್ಯಯನಗಳು, ಜಾಲಾಟ, ಭೂತಾರಾಧನೆ-ಜನಪದೀಯಅಧ್ಯಯನ, ಸಂಸ್ಕೃತಿಸಿರಿ ಇತ್ಯಾದಿ ಸಾಹಿತ್ಯಿಕ ಕೆಲಸಗಳನ್ನೂ ಮಾಡಿದ್ದಾರೆ.

ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸೆಮಿನಾರ್‌ಗಳಲ್ಲಿ ಹಾಗೂ ಬೇಸಿಗೆ ಕಾಲದ ಶಾಲಾ ಶಿಬಿರಗಳಲ್ಲಿ ಪಾಲ್ಗೊಂಡು ತಮ್ಮ ಅನುಭವಗಳನ್ನು ವಿಸ್ತರಿಸಿದ್ದಾರೆ. ಟರ್ಕಿ, ಫಿನ್ಲೇಂಡ್, ಜರ್ಮನಿ, ಜಪಾನ್‌ ಇತ್ಯಾದಿ ದೇಶಗಳ ವಿಶ್ವವಿದ್ಯಾಲಯಗಳಿಗೆ ಭೇಟಿಯಿತ್ತು ಸಂಶೋಧನೆ ಅಧ್ಯಯನಗಳನ್ನು ನಡೆಸಿರುವರು.

ಬಂಟ್ವಾಳ ತಾಲೂಕಿನ ವಿಟ್ಲ ಕಸಬ ಗ್ರಾಮದ ಕೂಡೂರಿನ ಕೃಷಿ ಕುಟುಂಬದಲ್ಲಿ ಜನಿಸಿ ತನ್ನ ಸ್ವಂತ ಪ್ರತಿಭೆಯೊಂದಿಗೆ ವಿದ್ಯಾಕ್ಷೇತ್ರ, ವಿದ್ವತ್‌ಕ್ಷೇತ್ರ, ಜಾನಪದ, ಯಕ್ಷಗಾನ ಹಾಗೂ ಸಾಹಿತ್ಯದ ಎಲ್ಲಾ ನೆಲೆಗಳಲ್ಲಿ ಸಾಧನೆಗಳನ್ನು ಗೈದ ಡಾ. ಚಿನ್ನಪ್ಪಗೌಡರು ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಮಾರ್ಗದರ್ಶನ ನೀಡಿದ್ದಾರೆ.

ಮಂಗಳೂರಿನಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನ, ಮೂಡಬಿದ್ರೆಯಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನ, ಯಕ್ಷಗಾನ ಸಾಹಿತ್ಯ ಸಮ್ಮೇಳನಗಳು, ಆಳ್ವಾಸ್ ನುಡಿಸಿರಿ, ಮಂಗಳೂರು ವಿಶ್ವವಿದ್ಯಾನಿಲಯದ ಮತ್ತುಕರ್ನಾಟಕ ಸರಕಾರ, ಜಿಲ್ಲಾಡಳಿತದ ಅನೇಕ ಸಾಹಿತ್ಯ ಸಾಂಸ್ಕೃತಿಕ ಭೂಮಿಕೆಗಳು ಹೀಗೆ ಹತ್ತುಹಲವು ರಾಜ್ಯಮಟ್ಟದ ಮತ್ತುರಾಷ್ಟ್ರೀಯ ಕಾರ್ಯಕ್ರಮಗಳಿಗೆ ಮಾರ್ಗದರ್ಶಕರಾಗಿ ಅವರು ಸಲ್ಲಿಸಿದ ಸೇವೆ ಅಪಾರ.

ಅವರ ಸಾಧನೆಗೆ ಅನೇಕ ಪ್ರಶಸ್ತಿಗಳೂ ಲಭಿಸಿವೆ. ಕರ್ನಾಟಕ ಜನಪದ ಮತ್ತುಯಕ್ಷಗಾನ ಅಕಾಡೆಮಿ ಪ್ರಶಸ್ತಿ, ವಾಸುದೇವ ಭೂಪಾಲಮ್‌ ಎಂಡೊಮೆಂಟ್ ಪ್ರಶಸ್ತಿ ಡಾ. ಶಿವರಾಮ ಕಾರಂತ ಎಂಡೋಮೆಂಟ್ ಪ್ರಶಸ್ತಿ, ಕು.ಶಿ. ಜಾನಪದ ಪ್ರಶಸ್ತಿ, ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸಂದೇಶ ಪುರಸ್ಕಾರ, ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಇತ್ಯಾದಿ ಪ್ರಮುಖವಾದವು.

ಮಂಗಳೂರು ವಿಶ್ವವಿದ್ಯಾಲಯದಲ್ಲಿರಿಜಿಸ್ಟ್ರಾರ್ ಆಗಿ ಸೇವೆಗೈದಿದ್ದಇವರು ವಿದ್ಯಾರ್ಥಿ ಕ್ಷೇಮನಿಧಿ ಹಾಗೂ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ, ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಜನಪದ ಮತ್ತುಯಕ್ಷಗಾನ ಅಕಾಡೆಮಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts